ಮೈಸೂರು(ಡಿ.06): ಪ್ರಿತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಮೇಲೆ ರೇಸರ್‌ನಿಂದ ಹಲ್ಲೆ ನಡೆಸಿಸಿದ ಯುವಕನ್ನು ವಿವಿ ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನ ಕೊಪ್ಪಲಿನ ನಿವಾಸಿ, ಖಾಸಗಿ ಕಂಪೆನಿಯ ಉದ್ಯೋಗಿ ಅಮೃತ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈತ ಹೆಬ್ಬಾಳಿನ ನಿವಾಸಿ ಪ್ರತಿಮಾ ಎಂಬುವರನ್ನು ಪ್ರೀತಿಸುವಂತೆ ಪದೇಪದೇ ಪೀಡಿಸುತ್ತಿದ್ದ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಡಿ.4ರಂದು ಬೆಳಗ್ಗೆ 9.30ರ ಸಮಯದಲ್ಲಿ ಒಂಟಿಕೊಪ್ಪಲಿನ ಚಂದ್ರೋದಯ ಆಸ್ಪತ್ರೆ ಬಳಿ ಕೆಲಸಕ್ಕೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು, ರೇಸರ್‌ನಿಂದ ಪ್ರತಿಮಾ ಅವರ ಮುಖಕ್ಕೆ ಇರಿದು ಪರಾರಿಯಾಗಿದ್ದಾರೆ.

ವೈದ್ಯೆ ರೇಪ್, ಕೊಲೆ ಪ್ರಕರಣ: ನಾಲ್ವರೂ ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗೆ ಬಲಿ!

ಗಾಯಗೊಂಡ ಪ್ರತಿಮಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಅಮೃತ್‌ನನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಲ್ಲೆ ನಡೆಸಿದವರ ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಗೆ ಬೆಂಕಿ ಇಟ್ಟಾಗ ಜೀವ ಇತ್ತು: ರಾಕ್ಷಸನ ಹೇಳಿಕೆಗೆ ಮನಸ್ಸು ಕದಲಿತ್ತು!