ಬೆಂಗಳೂರು, (ಜೂ.24) : ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

"

ವಿಧಾನಸೌಧದ 3ನೇ ಮಹಡಿಯ  ಶೌಚಾಲಯದಲ್ಲಿ ರೇವಣ್ಣ ಕುಮಾರ್ (45) ಎಂಬುವವರು ಸೋಮವಾರ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ರೇವಣ್ಣ ಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಆನೂರು ಗ್ರಾಮದವರು ಎಂದು ತಿಳಿದುಬಂದಿದೆ.

"

ರೇವಣ್ಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ರಂಥಾಲಯದಲ್ಲಿ ಗುತ್ತಿಗೆ ನೌಕರನಾಗಿದ್ದು, ಕಳೆದ ಏಳು ತಿಂಗಳು ಕಾಲ ವೇತನ ನೀಡಿಲ್ಲ. ಇದರಿಂದ ಬೇಸತ್ತು ವಿಧಾನಸೌಧಕ್ಕೆ ಆಗಮಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.ಆದ್ರೆ, ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಗಾಯಗೊಂಡಿರುವ ರೇವಣ್ಣ ಕುಮಾರ್‌ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,  ವಿಧಾನಸೌಧ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸುತ್ತಿದ್ದಾರೆ. 

"