ಮಾವನ ಅಂತ್ಯ ಸಂಸ್ಕಾರಕ್ಕೆ ಹೊರಟಿದ್ದ ಅಳಿಯ ಸಾವು
ಮಾವನ ಅಂತ್ಯ ಸಂಸ್ಕಾರಕ್ಕೆಂದು ಹೊರಟಿದ್ದ ಅಳಿಯ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ಬಾಳೆಹೊನ್ನೂರು [ಅ.02]: ಮಾವನ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಅಳಿಯ ರಸ್ತೆ ಅಪಘಾತದಲ್ಲಿ ಮೃತಪಟ್ಟಘಟನೆ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಹುಣಸೇಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬಾಳೆಹೊನ್ನೂರು ಸಮೀಪದ ಆಡುವಳ್ಳಿಯ ಯು.ಎನ್.ಸುರೇಶ್ (52) ಮೃತ ದುರ್ದೈವಿ. ಹುಣಸೇಹಳ್ಳಿ ಸಮೀಪದ ಪುರ ಎಂಬಲ್ಲಿ ಖಾಸಗಿ ಎಸ್ಟೇಟ್‌ನಲ್ಲಿ ರೈಟರ್ ಕೆಲಸ ಮಾಡುತ್ತಿದ್ದರು. ಪತ್ನಿಯ ತಂದೆ ಬಾಳೆಹೊನ್ನೂರು ಸಮೀಪದ ಹಲಸೂರಿನ ರಾಮೇಗೌಡ ಸೋಮವಾರ ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಹಾಗೂ ಅಂತ್ಯಸಂಸ್ಕಾರಕ್ಕಾಗಿ ಸುರೇಶ್ ಅವರು ಪತ್ನಿ ಹಾಗೂ ಮಗನೊಂದಿಗೆ ಹುಣಸೇಹಳ್ಳಿಯಿಂದ ಹೊರಟಿದ್ದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹುಣಸೇಹಳ್ಳಿಯಿಂದ ಬಾಳೆಹೊನ್ನೂರಿಗೆ ಬಸ್‌ನಲ್ಲಿ ತೆರಳಲು ರಸ್ತೆ ಬದಿ ಕಾಯುತ್ತಿದ್ದರು. ಇದೇ ವೇಳೆಯಲ್ಲಿ ಬಾಳೆಹೊನ್ನೂರು ಕಡೆಯಿಂದ ಆಲ್ದೂರು ಕಡೆಗೆ ತೆರಳುತ್ತಿದ್ದ ಕಾರೊಂದು ವೇಗವಾಗಿ ಬಂದು ಏಕಾಏಕಿ ಸುರೇಶ್ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುರೇಶ್ ಪತ್ನಿ ಹಾಗೂ ಮಗನಿಗೂ ಸಣ್ಣಪುಟ್ಟಗಾಯಗಳಾಗಿವೆ.
ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.