ಅಕ್ರಮ ಮದ್ಯ ಸೇವಿಸಿ ವ್ಯಕ್ತಿ ಸಾವು: ಮೃತದೇಹವಿಟ್ಟು ಸರ್ಕಾರದ ವಿರುದ್ಧ ಪ್ರತಿಭಟನೆ
ಅಕ್ರಮ ಮದ್ಯ ಮಾರಾಟ ಕೇಂದ್ರದಲ್ಲಿನ ಮದ್ಯ ಸೇವನೆ ಮಾಡಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಕೂಡಲೇ ಮದ್ಯ ಮಾರಾಟ ಮಳಿಗೆ ಮುಚ್ಚುವಂತೆ ಗ್ರಾಮಸ್ಥರು ಶವವನ್ನಿಟ್ಟು ಆಗ್ರಹಿಸಿದ್ದಾರೆ.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಮಾ.22): ಗಿರಿಜನರ ಹಾಡಿಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಮದ್ಯ ಸೇವನೆಯಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹಿಸಿ ಮೃತದೇಹವನ್ನು ಗ್ರಾಮದ ಮಧ್ಯದಲ್ಲಿಟ್ಟು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರು ಸಮೀಪದ ಕಿತ್ಲೆಗೋಳಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರು ಸಮೀಪದ ಕಿತ್ಲೆಗೋಳಿ ಎಂಬಲ್ಲಿ ಪುಟ್ಟಪ್ಪ ( 50 ವರ್ಷ ) ಎಂಬ ಕೂಲಿ ಕಾರ್ಮಿಕರೊಬ್ಬರು ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ ಘಟನೆ ನಡೆದಿದೆ. ಗ್ರಾಮದಲ್ಲಿ ಇದುವರೆಗೂ ಅಕ್ರಮ ಮದ್ಯಕ್ಕೆ ಹಲವು ಸಾವಾಗಿದ್ದರೂ ಸಂಬಂಧಪಟ್ಟ ಇಲಾಖೆ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿಲ್ಲ. ಇದರಿಂದ ಅಮಾಯಕರ ಸಾವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಸಂಬಂಧಿಕರು ಶವವನ್ನು ಇಟ್ಟು ಪ್ರತಿಭಟಿಸಿದರು. ಅಲ್ಲದೆ ಮದ್ಯ ಮಾರಾಟದ ಅಂಗಡಿಗಳಿಗೆ ಮತ್ತಿಗೆ ಹಾಕಿ ಮಹಿಳೆಯರ ಆಕ್ರೋಶವನ್ನು ಹೊರಹಾಕಿದರು.
Chikkamagaluru: ಸ್ವಕ್ಷೇತ್ರದಲ್ಲಿ ಅಭ್ಯರ್ಥಿ ಪರ ಪ್ರಜ್ವಲ್ ರೇವಣ್ಣ ಪ್ರಚಾರ, ದತ್ತಾ ಮೇಷ್ಟ್ರು ವಿರುದ್ಧ ವಾಗ್ದಾಳಿ
ಠಾಣೆ ಎದುರು ಪ್ರತಿಭಟನೆಗೆ ಸಜ್ಜು: ಅಕ್ರಮ ಮದ್ಯ ಮಾರಾಟದ ವಿರುದ್ಧ ಸಿಡಿದೆದ್ದ ಮಹಿಳೆಯರು ಶವ ವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹರಳಾನೇ ಗ್ರಾಮದ ಕಿತ್ಲೆಗೋಳಿ ಸೈಟ್ ನಲ್ಲಿ ಮದ್ಯ ಮಾರಾಟದ ವಿರುದ್ಧ ಶವವಿಟ್ಟು ಪ್ರತಿಭಟನೆ ಮಾಡಿ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಅಲ್ಲದೆ ಮದ್ಯ ಮಾರಾಟದ ಅಂಗಡಿಗಳಿಗೆ ಮತ್ತಿಗೆ ಹಾಕಿ ಮಹಿಳೆಯರ ಆಕ್ರೋಶ ಹೊರಹಾಕಿದ್ದಾರೆ. ಗಿರಿಜನರೆ ಅಧಿಕವಾಸವಾಗಿರುವ ಇಲ್ಲಿ 6 ಮದ್ಯದ ಅಂಗಡಿಗಳು ಅನಧಿಕೃತವಾಗಿ ನಡೆಯುತ್ತಿದ್ದು, ಕುಡಿದು ವಾರಕ್ಕೊಬ್ಬರು ಸಾಯುತ್ತಿದ್ದಾರೆ ಎಂದು ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಆಗಮಿಸುವವರೆಗೂ ಶವದ ಅಂತ್ಯಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಶವವನ್ನಿಟ್ಟು ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಬಾರದಿದ್ದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆಗೆ ಕೂರುವುದಾಗಿ ಎಚ್ಚರಿಕೆ ನೀಡಿದರು.
ಚುನಾವಣೆಗೂ ಮುನ್ನವೇ ಬೆಟ್ಟಿಂಗ್: ಬೆಳ್ಳಿ ಪ್ರಕಾಶ್ ಗೆಲ್ಲುತ್ತಾರೆಂದು ತನ್ನ ಇಡೀ ಆಸ್ತಿಯನ್ನೇ ಬಾಜಿಗಿಟ್ಟ ವ್ಯಕ್ತಿ!
ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವ ಭರವಸೆ: ಪ್ರತಿಭಟನಾಕಾರರ ಎಚ್ಚರಿಕೆಯ ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಗುಂಜನ್ ಆರ್ಯ ನಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಗ್ರಾಮಸ್ಥರು ಪೊಲೀಸರೊಂದಿಗೆ ಕೆಲಕಾಲ ವಾಗ್ವಾದವನ್ನು ಕೂಡ ನಡೆಸಿದರು. ಮುಂದಿನ ದಿನಗಳಲ್ಲಿ ಅಕ್ರಮ ಮದ್ಯಮಾರಾಟದ ಕಡಿವಾಣಕ್ಕೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು. ಈ ನಂತರ ಪ್ರತಿಭಟನಾಕಾರರು ಶವವನ್ನು ಪ್ರತಿಭಟನಾ ಸ್ಥಳದಿಂದ ಅಂತ್ಯಸಂಸ್ಕಾರ ನಡೆಸಲು ತೆಗೆದುಕೊಂಡು ಹೋದರು.