ಮಂಗಳೂರಿನ ಹೊರವಲಯ ಸುರತ್ಕಲ್‌ ನಿವಾಸಿಯೊಬ್ಬರು ಉಸಿರಾಟ ತೊಂದರೆಯಿಂದ ವ್ಯಕ್ತಿ ಸಾವಿಗೀಡಾಗಿದ್ದು, ಈ ಹಿನ್ನೆಲೆಯಲ್ಲಿ ಮೃತದೇಹದ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಂಗಳೂರು(ಏ.15): ಮಂಗಳೂರಿನ ಹೊರವಲಯ ಸುರತ್ಕಲ್‌ ನಿವಾಸಿಯೊಬ್ಬರು ಉಸಿರಾಟ ತೊಂದರೆಯಿಂದ ವ್ಯಕ್ತಿ ಸಾವಿಗೀಡಾಗಿದ್ದು, ಈ ಹಿನ್ನೆಲೆಯಲ್ಲಿ ಮೃತದೇಹದ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುರತ್ಕಲ್‌ನ 27 ವರ್ಷ ವಯಸ್ಸಿನ ಯುವಕ ಉಸಿರಾಟದ ತೊಂದರೆಗೆ ಒಳಗಾಗಿದ್ದಾನೆ. ವ್ಯಕ್ತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವು ಸಂಭವಿಸಿದೆ.

ರೋಗಿಯ ನೆಪದಲ್ಲಿ ಅಕ್ರಮವಾಗಿ ಬಂದ 6 ಮಂದಿಗೆ ಕ್ವಾರಂಟೈನ್‌

ಕೊರೋನಾ ಸೋಂಕಿನ ಲಕ್ಷಣವೂ ಉಸಿರಾಟದ ಸಮಸ್ಯೆ ಆಗಿರುವುದರಿಂದ ಮೃತದೇಹದ ಸ್ಯಾಂಪಲ್‌ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.