ಕಾಲುವೆ ಒತ್ತುವರಿ ಸಮಸ್ಯೆ: ಮಂಡಘಟ್ಟ ಗ್ರಾ.ಪಂ. ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ

ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಶಿವಮೊಗ್ಗ ತಾಲ್ಲೂಕಿನ ಮಂಟಘಟ್ಟ ಗ್ರಾಮ ಪಂಚಾಯ್ತಿ ಕಚೇರಿ ಎದುರು ಗ್ರಾಮದ ನಿವಾಸಿ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

man hunger strike in front of Mandaghatta grama panchayath against  encroachment  in  Shivamogga gow

ಶಿವಮೊಗ್ಗ (ಜ.26): ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಶಿವಮೊಗ್ಗ ತಾಲ್ಲೂಕಿನ ಮಂಟಘಟ್ಟ ಗ್ರಾಮ ಪಂಚಾಯ್ತಿ ಕಚೇರಿ ಎದುರು ಗ್ರಾಮದ ನಿವಾಸಿ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಉಮೇಶ್ ಅವರು ಕಳೆದ ನಾಲ್ಕು ವರ್ಷಗಳಿಂದ ರಾಜ ಕಾಲುವೆ ಒತ್ತುವರಿಯಾಗಿರುವುದರಿಂದ ತಮ್ಮ ಮನೆಗೆ ಮಳೆ ನೀರು ನುಗ್ಗುತ್ತಿದೆ. ಇದರಿಂದ ತಮಗೆ ಪ್ರತಿ ವರ್ಷ ಸಂಕಷ್ಟ ಎದುರಾಗುತ್ತಿದೆ. ಈ ಬಗ್ಗೆ 4 ವರ್ಷಗಳಿಂದಲೂ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಇದರಿಂದಾಗಿ ಪ್ರತಿ ವರ್ಷ ಮಳೆಗಾಲದಲ್ಲಿ ಏನಾಗುವುದೋ ಎಂಬ ಆತಂಕದಲ್ಲೇ ದಿನ ದೂಡಬೇಕಿದೆ. ಗ್ರಾಮ ಪಂಚಾಯ್ತಿ ಆಡಳಿತದ ನಿರ್ಲಕ್ಷ್ಯದಿಂದಾಗಿ ನಾನು ಮತ್ತು ನನ್ನ ಕುಟುಂಬದವರು ನೊಂದಿದ್ದೇವೆ. ಅನ್ಯಾಯವನ್ನು ಸರಿಪಡಿಸುವಂತೆ ಡಿಸೆಂಬರ್ 26ರಂದು ಉಪವಾಸ ಸತ್ಯಾಗ್ರಹ ಕುಳಿತಿದ್ದಾಗ ತಾಲ್ಲೂಕು ಪಂಚಾಯ್ತಿ ಮುಖ್ಯಾಧಿಕಾರಿ ಅವಿನಾಶ್ ಅವರು ಒಂದು ತಿಂಗಳಲ್ಲಿ ಅವರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ, ಒಂದು ತಿಂಗಳ ಗಡುವು ಮುಗಿದರೂ ಸಮಸ್ಯೆ ಬಗೆಹರಿದಿಲ್ಲ. ಆದರೆ, ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಬದಲು ಮತ್ತಷ್ಟು ಜಟಿಲಗೊಳಿಸುತ್ತಿದ್ದಾರೆ ಎಂದು ಉಮೇಶ್ ಆರೋಪಿಸಿದರಲ್ಲದೇ, ಸಮಸ್ಯೆಯನ್ನು ಸರಿಪಡಿಸುವವರೆಗೂ ಉಪವಾಸ ಧರಣಿ ಕೈಬಿಡುವುದಿಲ್ಲ ಎಂದು ತಿಳಿಸಿದರು.

ಡಿಕೆಶಿ ಹೇಳಿಕೆ ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ: ಸಚಿವ ಅಶ್ವತ್ಥ ನಾರಾಯಣ್‌

ಕೃಷಿ ಋುಷಿ ಪ್ರಶಸ್ತಿಗೆ ಗುಜರಾತಿನ ಧುನುಬೆನ್‌, ಮಗನ್‌ ಭಾಯಿ ಆಯ್ಕೆ
ತೀರ್ಥಹಳ್ಳಿ: ಕೃಷಿಋುಷಿ ಎಂ. ಪುರುಷೋತ್ತಮರಾವ್‌ ಹಾಗೂ ಶಾಂತಾ ಪಿ. ರಾವ್‌ ಹೆಸರಿನಲ್ಲಿ ಕುರುವಳ್ಳಿಯ ಪುರುಷೋತ್ತಮ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಪುರುಷೋತ್ತಮ ಪ್ರಶಸ್ತಿಗೆ ಈ ಬಾರಿ ಗುಜರಾತಿನ ಕಛ್‌ ಜಿಲ್ಲೆಯ ಧನುಬೆನ್‌ ಮತ್ತು ಮಗನ್‌ ಭಾಯಿ ಹಮೀರ್‌ ಬಾಯಿ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ವಿಶ್ವಸ್ಥರಾದ ಅರುಣ್‌ ಕುಮಾರ್‌ ತಿಳಿಸಿದರು.

ತೀರ್ಥಹಳ್ಳಿ: ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂದೆ ಕಿಮ್ಮನೆ ನೇತೃತ್ವದಲ್ಲಿ ಅಹೋ ರಾತ್ರಿ ಧರಣಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜ. 27ರಂದು ಗೃಹ ಸಚಿವ ಆರಗ ಜ್ಞಾನೇಂದ್ರ ಉಪಸ್ಥಿತಿಯಲ್ಲಿ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ಸಮಾರಂಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್‌. ವರದಾಚಾರ್‌ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖರಾದ ಮಂಗೇಶ್‌ ಭೇಂಡೆ ಪಾಲ್ಗೊಳ್ಳಲಿದ್ದಾರೆ ಎಂದರು.

Latest Videos
Follow Us:
Download App:
  • android
  • ios