ವಿಜಯಪುರ :  ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. 

ವಿಜಯಪುರ ಜಿ. ಇಂಡಿ ಪಟ್ಟಣದ ಕಂದಾಯ ಇಲಾಖೆಯ ನಿರೀಕ್ಷಕರ ಕಚೇರಿ ಎದುರು ಕೊಲೆ ನಡೆದಿದ್ದು, ಗಂಡನ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಹೋಗುತ್ತಿದ್ದ ವೇಳೆ ಪತಿ ಖಾಜಿಸಾಬ್ ಬಾಗವಾನ್, ಪತ್ನಿ ಶಾಹಿದಾ ಬಾಗವಾನ್ ರನ್ನು ಹತ್ಯೆ ಮಾಡಿದ್ದಾರೆ. 

ಬೈಕ್ ಮೇಲೆ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ದಂಪತಿ ನಡುವಿನ ಕಲಹವೇ ಇದಕ್ಕೆ ಕಾರಣ ಎನ್ನಲಾಗಿದೆ. 

ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಲು ಹೊರಟಿದ್ದ ವೇಳೆ ಭಿಕರವಾಗಿ ಹತ್ಯೆ ಮಾಡಲಾಗಿದ್ದು, ಸ್ಥಳಕ್ಕೆ ಇಂಡಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.