ಮಂಡ್ಯ(ಸೆ.04): ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಯನ್ನು ಜಮೀನಿಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗ್ರಾಮದ ರವಿ(40) ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪಿ. ಮನೆಯ ಮುಂಭಾಗ ಆಟವಾಡುತ್ತಿದ್ದ ಪುಟ್ಟಬಾಲಕಿಯನ್ನು ಪುಸಲಾಯಿಸಿ ತನ್ನ ಬೈಕ್‌ನಲ್ಲಿ ಜಮೀನಿಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಆರೋಪಿ ರವಿ, ಪುನಃ ಮನೆಗೆ ಕರೆತಂದು ಬಿಟ್ಟಿದ್ದಾನೆ.

ರಾಮನಗರ: ಮೂವರಿದ್ದ ಒಂದು ಕುಟುಂಬ ನೇಣಿಗೆ ಶರಣು

ಈ ವೇಳೆ ತನ್ನ ಬಾಧೆಯನ್ನು ಸಹಿಸಲಾರದ ಬಾಲಕಿ ನಡೆದ ಘಟನೆಯನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಬಿಂಡಿಗನವಿಲೆ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಾಲಕಿಯನ್ನು ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಆರೋಪಿ ರವಿ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಧೀಶರೆದುರು ಹಾಜರುಪಡಿಸಿದ್ದಾರೆ.