ಮಡಿಕೇರಿ(ಏ.28): ಸಿದ್ದಾಪುರದ ಸಮೀಪದ ನೆಲ್ಯಹುದಿಕೇರಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರು ಯುವಕರ ವಿರುದ್ಧ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ನೆಲ್ಯಹುದಿಕೇರಿಯ ಬೆಟ್ಟದ ಕಾಡು ನಿವಾಸಿ ದೀಪಕ್‌ (25) ಎಂಬಾತ ಅಪ್ರಾಪ್ತ ಬಾಲಕಿ ಮೇಲೆ ಆತ್ಯಾಚಾರಕ್ಕೆ ಯತ್ನಿಸಿರುವುದಾಗಿ ಆರೋಪಿಸಿ ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮೆರಿಕದ ಪ್ರತಿ 7 ಕೊರೋನಾ ವೀರರಲ್ಲಿ ಒಬ್ಬ ಭಾರತೀಯ!

ಸಿದ್ದಾಪುರ ಪೊಲೀಸರು ಪೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಆರೋಪಿಯನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ನಿವಾಸಿಗಳಾದ ಬಶೀರ್‌(32), ನಜೀಬ್‌(25), ಜಾಬೀರ್‌(34) ಎಂಬ ಮೂವರು ಸೇರಿ ರಾಡ್‌ ಹಾಗೂ ಕಲ್ಲಿನಿಂದ ದೀಪಕ್‌ ತಲೆಗೆ ಹಲ್ಲೆ ನಡೆಸಿದ್ದು ತಲೆಗೆ ಗಂಭೀರ ಗಾಯವಾಗಿದೆ.

ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು!

ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ದೀಪಕ್‌ ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ.