ಮಂಡ್ಯ(ನ.19): ಅನೈತಿಕ ಸಂಬಂಧಕ್ಕೆ ಒಪ್ಪದ ಸೊಸೆಯನ್ನು ಕೊಂದು ಜೈಲಿನಲ್ಲಿದ್ದ ಮಾವ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೊಸೆಯನ್ನೇ ಮಂಚಕ್ಕೆ ಕರೆದಿದ್ದ ಕಾಮುಕ ಮಾವ ಅನೈತಿಕ ಸಂಬಂಧಕ್ಕೆ ಒಪ್ಪದ ಆಕೆಯನ್ನು ಹಾಡ ಹಗಲೇ ಕೊಲೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಇದೀದ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಲೆ ಆರೋಪಿ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನಾಗರಾಜು(56)ಆತ್ಮಹತ್ಯೆಗೆ ಶರಣಾದ ಕೊಲೆ ಆರೋಪಿ. ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ನಾಗರಾಜು ನವೆಂಬರ್ 9 ರಂದು ತನ್ನ ಸೊಸೆ ಲಕ್ಷ್ಮೀ ಎಂಬಾಕೆಯನ್ನು ಕೊಲೆಗೈದಿದ್ದ ಘಟನೆ ವರದಿಯಾಗಿತ್ತು. ಅಕ್ರಮ ಸಂಬಂಧಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು.

ಅನೈತಿಕ ಸಂಬಂಧಕ್ಕೆ ಒಪ್ಪದ ಸೊಸೆಯನ್ನೇ ಕೊಂದ ಮಾವ..!

ಅಕ್ರಮ ಸಂಬಂಧಕ್ಕೆ ಒಪ್ಪದಿದ್ದಕ್ಕೆ ಕೊಲೆ ಮಾಡಿದ್ದಾರೆಂದಿದ್ದ ನಾಗರಾಜು ಪುತ್ರ ಅನಿಲ್ ಆರೋಪಿಸಿದ್ದರು. ಇಂದು ಮುಂಜಾನೆ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ನಾಗರಾಜು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಪ್ರೇಮ ವಿವಾಹವಾಗಿದ್ದ ನವ ವರನನ್ನು ಕೊಲೆ ಮಾಡಿ ನದಿಗೆಸೆದ್ರು..!

ನವೆಂಬರ್ 19ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: