* 15 ದಿನದಲ್ಲಿ ಮನಮೈನಹಟ್ಟಿ ಸಮಸ್ಯೆ ಮುಕ್ತ ಗ್ರಾಮವಾಗಿ ಘೋಷಣೆ* ಕಂದಾಯ ಗ್ರಾಮವಾಗಿ ಘೋಷಣೆ ಪ್ರಸ್ತಾಪವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು* ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭರವಸೆ 

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ, (ಏ.30):
ಮನಮೈನಹಟ್ಟಿಯಲ್ಲಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. ಗ್ರಾಮದ ಎಲ್ಲಾ ಸಮಸ್ಯೆಗಳನ್ನು ಪಟ್ಟಿ ಮಾಡಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಗ್ರಾಮಕ್ಕೆ ಕಲ್ಪಿಸಿ 15 ದಿನದಲ್ಲಿ ಸಮಸ್ಯೆ ಮುಕ್ತ ಗ್ರಾಮವಾಗಿ ಘೋಷಣೆ ಮಾಡಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು(ಶನಿವಾರ) ಮೊಣಕಾಲ್ಮೂರು ಕ್ಷೇತ್ರದ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿಯಲ್ಲಿ 12 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮನಮೈನಹಟ್ಟಿಗೆ ರಾಜ್ಯ ತಾಂಡ ಅಭಿವೃದ್ದಿ ನಿಗಮದಿಂದ 40 ಲಕ್ಷ ಹಾಗೂ ಆದರ್ಶ ಗ್ರಾಮದಿಂದ 60 ಲಕ್ಷ ರೂಪಾಯಿಗಳನ್ನು ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಂಜೂರು ಮಾಡಲಾಗಿದೆ. ಲಂಬಾಣಿ ಸಮಾಜ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಬೆಳೆಯಬೇಕು.‌ ರಾಜ್ಯದಲ್ಲಿನ 150 ಕೆಳಸಮುದಾಯಗಳ ಅಭಿವೃದ್ಧಿ ಸರ್ಕಾರ ಬದ್ಧವಾಗಿದೆ ಎಂದರು.

Chitradurga ಸಕ್ಕರೆ ಕಾರ್ಖಾನೆ ಮತ್ತೆ ತೆರೆಯುವಂತೆ ಹಿರಿಯೂರು ಜನರ ಆಗ್ರಹ

ಎಸ್.ಸಿ ಮೀಸಲಾತಿ ಪ್ರಮಾಣವನ್ನು 15 ರಿಂದ 17 ಕ್ಕೆ ಎಸ್.ಟಿ. ಮೀಸಲಾತಿಯನ್ನು 3.5 ರಿಂದ 7 ಕ್ಕೆ ಹೆಚ್ಚಿಸವ ನಿಟ್ಟಿನಲ್ಲಿ ಸರ್ಕಾರ ಮಟ್ಟದಲ್ಲಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿಲಾಗಿದೆ. ಸರ್ಕಾರ ಈ ಭಾಗದ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಭದ್ರ ಮೇಲ್ದಂಡೆ ಯೋಜನೆಗೆ‌ 3500 ಕೋಟಿ ಹಣ ನೀಡಲಾಗಿದೆ.‌ ಪ್ರತಿ ಹಳ್ಳಿಗೆ ತುಂಗಭದ್ರ ನದಿ ನೀರು ಕೊಡುತ್ತೇವೆ. ಪ್ರಕೃತಿ ಸಹಾಯದಿಂದ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಪರಿಹಾರವಾಗಿದೆ. ಭ್ರಷ್ಟಾಚರಕ್ಕೆ ಸರ್ಕಾರ ಕಡಿವಾಣ ಹಾಕಿದೆ. ಕೋವಿಡ್ ಸಂಕಷ್ಟ ಕಾಲದಲ್ಲಿ ನೀಡುತ್ತಿದ್ದ 5 ಅಕ್ಕಿಯನ್ನು 10 ಕೆ.ಜಿ. ಏರಿಸಲಾಗಿದೆ. ಕ್ಷೇತ್ರದ ಜನರ ಕರುಣೆ ನನ್ನ ಮೇಲಿದೆ. ಕೇವಲ ನಾಮಪತ್ರ ಸಲ್ಲಿಸಿದ್ದಕ್ಕೆ ಮತ ನೀಡಿ ಗೆಲ್ಲಿಸಿದ್ದಾರೆ.
 ಜೀವತವಾಧಿಯಲ್ಲಿ ನಿಮ್ಮ ಋಣ ತಿರೀಸಲಾಗುವುದಿಲ್ಲ ಎಂದು ಸಚಿವ ಶ್ರೀರಾಮುಲು ಭಾವುಕವಾಗಿ ಹೇಳಿದರು. ಮನಮೈನಹಟ್ಟಿಯನ್ನು ಕಂದಾಯ ಗ್ರಾಮವಾಗಿ ಘೋಷಣೆ ಪ್ರಸ್ತಾಪವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.