ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ತಿಮ್ಮಯ್ಯ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ತಿಮ್ಮಯ್ಯ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಮಂಡ್ಯದಲ್ಲಿ ಸಾರ್ವಜನಿಕರು ಹಾಗೂ ಸಹೋದ್ಯೋಗಿಗಳ ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ತದನಂತರ ಮೈಸೂರಿನಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.