ಮಂಡ್ಯ [ಸೆ.13]: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಂಡ್ಯ ಬಿಜೆಪಿ ಮುಖಂಡರು ತಿರುಗಿ ಬಿದ್ದಿದ್ದಾರೆ. 

ಮಂಡ್ಯ ಮನ್ ಮುಲ್ ಗೆ ಪ್ರಸನ್ನ ಎಂಬುವವರನ್ನ ನಿರ್ದೇಶಕರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ ಸಂಬಂಧ ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಯಡಿಯೂರಪ್ಪ ಆದೇಶಕ್ಕೆ ತಡೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಾಜಿ ಸಿಎಂ ಎಸ್.ಎಂ.ಕೃಷ್ಣ ಮನವಿ ಮೇರೆಗೆ ಯಡಿಯೂರಪ್ಪ ಸೆ.11 ರಂದು ಪ್ರಸನ್ನ ಅವರನ್ನು ನಿರ್ದೇಶಕರಾಗಿ ಆಯ್ಕೆ ಮಾಡಿ ಆದೇಶ ನೀಡಿದ್ದರು. 

ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ್ದ ಪ್ರಸನ್ನರನ್ನು ಆಯ್ಕೆ ಮಾಡಿರುವುದು ಇದೀಗ ಮಂಡ್ಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.  ಆದ್ದರಿಂದ ಪಕ್ಷದ ಕಾರ್ಯಕರ್ತರು ಹಾಗೂ ಅಧ್ಯಕ್ಷರಿಗೆ ಅವಕಾಶ ನೀಡುವಂತೆ ಜಿಲ್ಲಾ ಸಮಿತಿ ಮನವಿ ಮಾಡಿದೆ.