ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿಯ ವಿ.ಸಿ. ನಾಲೆಯಲ್ಲಿ ಸಂಭವಿಸಿದ ಭೀಕರ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಚಾಲಕ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಮಂಡ್ಯ, [ಡಿ.09]: ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಘಟನೆ ನಡೆದು 15 ದಿನಗಳ ಬಳಿಕ ಬಸ್ ಚಾಲಕ ಪಾಂಡವಪುರ ಪೊಲೀಸರ ಬಲೆಗೆ ಬಿದ್ದಿದ್ದು, ಆರೋಪಿಯನ್ನು ಬಸ್ ಚಾಲಕನನ್ನು ಹೊಳಲು ಗ್ರಾಮದ ಶಿವಣ್ಣ ಎಂದು ಹೇಳಲಾಗಿದೆ.
ತಡವಾಗಿ ಬೆಳಕಿಗೆ ಬಂತು ಮಂಡ್ಯ ದುರಂತದ ಹಿಂದಿನ ಕಾರಣ!
ನಾಳೆ [ಸೋಮವಾರ] ಮಂಡ್ಯ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಲಿದ್ದಾರೆ. ಕಳೆದ ತಿಂಗಳು ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಮಂದಿ ಪ್ರಾಣ ಕಳೆದುಕೊಂಡಿದ್ದರು.
ಬಸ್ ಚಾಲಕ ಮತ್ತು ಕಂಡಕ್ಟರ್ ಇಬ್ಬರು ಪ್ರಾಣಾಪಾಯದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು.
