ಮಂಡ್ಯ(ಜು.25): ಮಳೆಗಾಗಿ ಪ್ರಾರ್ಥಿಸಿ ಕೆಆರ್‌ಎಸ್‌ ಡ್ಯಾಂನ ಕಾವೇರಿ ಪ್ರತಿಮೆಗೆ ಮಂಡ್ಯ ಜಿಲ್ಲಾಡಳಿತದಿಂದ ವಿಶೇಷ ಪೂಜೆ ನಡೆಸಲಾಗಿದೆ. ಇದೇ ಸಂದರ್ಭ ಜಿಲ್ಲಾಧಿಕಾರಿ ಮಂಜುಶ್ರೀ, ಹಾಗೂ ಎಸ್‌ಪಿ ಶಿವಪ್ರಕಾಶ್ ದೇವರಾಜು ಕೆಆರ್‌ಎಸ್ ಡ್ಯಾಂ ವೀಕ್ಷಣೆ ಮಾಡಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಡ್ಯಾಂನಲ್ಲಿ ಮಳೆಗಾಗಿ ಪ್ರಾರ್ಥಿಸಿ ಮಂಡ್ಯ ಜಿಲ್ಲಾಡಳಿತದಿಂದ ಪೂಜೆ ಸಲ್ಲಿಸಿದೆ. ಜಿಲ್ಲಾಧಿಕಾರಿ ಮಂಜುಶ್ರೀ, ಎಸ್ಪಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ಪೂಜೆ ನಡೆದಿದೆ.

ಈ ಬಾರಿ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಭರ್ತಿಯಾಗಿಲ್ಲ. ಇದರಿಂದಾಗಿ ಮಂಡ್ಯ ಜಿಲ್ಲೆಯಲ್ಲಿ ಇನ್ನೂ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಾರಂಭವಾಗಿಲ್ಲ. ಇನ್ನಾದರೂ ಉತ್ತಮ ಮಳೆಯಾಗಲಿ ಎಂದು ಮಂಡ್ಯ ಜಿಲ್ಲಾಡಳಿತ ಸಿಬ್ಬಂದಿ ದೇವರ ಮೊರೆ ಹೋಗಿದ್ದಾರೆ.

ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆ, 2 ದಿನ ರೆಡ್ ಅಲರ್ಟ್

ಬಲಮುರಿ ಪ್ರವಾಸಿ ತಾಣ ಪರಿಶೀಲನೆ:

ಪೂಜೆಯ ನಂತರ ಜಿಲ್ಲಾಧಿಕಾರಿ ಮಂಜುಶ್ರೀ, ಹಾಗೂ ಎಸ್‌ಪಿ ಶಿವಪ್ರಕಾಶ್ ದೇವರಾಜು ಕೆಆರ್‌ಎಸ್ ವೀಕ್ಷಣೆ ಮಾಡಿದ್ದಾರೆ. ನಂತರ ಬಲಮುರಿ ಪ್ರವಾಸಿ ತಾಣಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವ ಘಟನೆ ಹೆಚ್ಚಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮತ್ತಷ್ಟು ಮುಂಜಾಗೃತ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಡಿಸಿ, ಎಸ್ಪಿಗೆ ನೀರಾವರಿ ನಿಗಮ ಹಾಗೂ ತಾಲೂಕು ಅಧಿಕಾರಿಗಳು ಸಾಥ್ ನೀಡಿದ್ದಾರೆ.