ಅಬಕಾರಿ ದಾಳಿಯ ವೇಳೆ 125.190 ಲೀ ಅಕ್ರಮ ಮದ್ಯ, 2,500 ಲೀ ಬಿಯರ್ ಜಪ್ತಿ ಮಾಡಿ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 69 ಆರೋಪಿಗಳನ್ನು ಬಂಧಿಸಿ, ತನಿಖೆ ನಡೆಸಲಾಗುತ್ತಿದೆ.
ಮಂಡ್ಯ[ಅ.23]: ಅಬಕಾರಿ ಇಲಾಖೆ ವತಿಯಿಂದ ಮಂಡ್ಯ ಲೋಕಸಭಾ ಉಪ ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ, 13 ಘೋರ ಪ್ರಕರಣಗಳು ಸೇರಿದಂತೆ 82 ಪ್ರತ್ಯೇಕ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಬಕಾರಿ ದಾಳಿಯ ವೇಳೆ 125.190 ಲೀ ಅಕ್ರಮ ಮದ್ಯ, 2,500 ಲೀ ಬಿಯರ್ ಜಪ್ತಿ ಮಾಡಿ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 69 ಆರೋಪಿಗಳನ್ನು ಬಂಧಿಸಿ, ತನಿಖೆ ನಡೆಸಲಾಗುತ್ತಿದೆ. ವಶಪಡಿಸಿಕೊಂಡ ವಸ್ತುಗಳ ಅಂದಾಜು ಮೌಲ್ಯ 3,02,027 ರು. ಗಳಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.
