ಮಂಡ್ಯ(ಆ.01): ಕೃಷ್ಣರಾಜ ಸಾಗರ ಜಲಾಶಯದಿಂದ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ತಡೆದು ಬುಧವಾರ ಪ್ರತಿಭಟಿಸಿದರು.

ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರಿನ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಧರಣಿ ನಡೆಸಿದ ರೈತ ಸಂಘದ ಕಾರ್ಯಕರ್ತರು, ಅಣೆಕಟ್ಟೆಭರ್ತಿಗೂ ಮುನ್ನವೇ ತಮಿಳುನಾಡಿಗೆ ನೀರು ಬಿಟ್ಟಿರುವುದು ಖಂಡನೀಯ. ಕೂಡಲೇ ನದಿಗೆ ಹರಿದು ಹೋಗುತ್ತಿರುವ ನೀರನ್ನು ನಿಲ್ಲಿಸಿ, ನಾಲೆಗಳ ಮೂಲಕ ನೀರನ್ನು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕೆಂದು ಆಗ್ರಹಿಸಿದರು.

ತಮಿಳುನಾಡಿಗೆ ಸದ್ದಿಲ್ಲದೆ ನೀರು ಹರಿಸ್ತಿದೆಯಾ ಸರ್ಕಾರ..?

ಕೆಆರ್‌ಎಸ್‌ ಮತ್ತು ಹೇಮಾವತಿ ವ್ಯಾಪ್ತಿಯ ಬೆಳೆಗಳು ಒಣಗುತ್ತಿದ್ದರೂ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಕ್ರಮವನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಉಪಾಧ್ಯಕ್ಷ ರಾಮಕೃಷ್ಣಯ್ಯ, ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ಪ್ರಧಾನ ಕಾರ್ಯದರ್ಶಿ ಬೊಮ್ಮೇಗೌಡ, ಲಿಂಗಪ್ಪಾಜಿ, ಹಲ್ಲೇಗೆರೆ ಹರೀಶ, ರವಿಕುಮಾರ್‌,ಸಿದ್ದೇಗೌಡ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಶಂಕರ್‌ ಪಾಲ್ಗೊಂಡಿದ್ದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ