ಮಂಡ್ಯ [ಜೂ.28] : ಬೇಸಿಗೆ ಬೆಳೆಗಳಿಗೆ ನೀರು ಕೊಡುವಂತೆ ಒತ್ತಾಯಿಸಿ ರೈತಸಂಘದ ಕಾರ‍್ಯಕರ್ತರ ಕಳೆದ 7 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ರೈತ ಸಂಘದ ಕಾರ್ಯಕರ್ತರ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣ ಕಂಡುಬಂದಿದೆ. 

ಇಂದು 11 ಗಂಟೆಯೊಳಗೆ ನಾಲೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳದಿದ್ದರೆ ಕೆಆರ್‌ಎಸ್‌ ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದ್ದಾರೆ.

ನೀರು ಬಿಡುವಂತೆ ಆಗ್ರಹಿಸಿ ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ 7 ದಿನಗಳಿಂದ ರೈತ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರದಿಂದ ಯಾವುದೇ ಸ್ಪಂದನೆ ಲಭಿಸದ ಕಾರಣ, ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಕೆಆರ್‌ಎಸ್‌ ಜಲಾಶಯಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ. 

ಒಂದೊಮ್ಮೆ ಇಂದು 11ರೊಳಗೆ ಈ ಕುರಿತು ತೀರ್ಮಾನಕೈಗೊಳ್ಳದಿದ್ದರೆ ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿ ಸರ್ಕಾರಕ್ಕೆ ಗಡುವು ನೀಡಿದ್ದಾರೆ.