ಮಂಡ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಸುಮಾರು 30 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಡ್ಯ (ಜ.20): ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ ಹೊಡೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಸುಮಾರು 30 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬಳಿ ಘಟನೆ ನಡೆದಿದೆ. ಕೊಳ್ಳೆಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುರಸ್ತೆಯಲ್ಲಿಯೇ ಪಲ್ಟಿಯಾಗಿದೆ. ವೇಗವಾಗಿ ಬರುತ್ತಿದ್ದ ವೇಳೆ ಡಿವೈಡರ್ ಹತ್ತಿ ಬಸ್ ಪಲ್ಟಿ ಹೊಡೆದಿದೆ. ಹಳೇ ಬೆಂಗಳೂರು ಮೈಸೂರು ‌ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. KA 10 F 0520 ನಂಬರ್‌ನ ಬಸ್‌ ನಡುರಸ್ತೆಯಲ್ಲಿಯೇ ಉರುಳಿಬಿದ್ದಿದ್ದರಿಂದ ದೊಡ್ಡ ಮುಟ್ಟದ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಇದೇ ವೇಳೆ ಸ್ಥಳಕ್ಕೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿದ್ದಾರೆ. ಕಾರ್ಯಕ್ರಮ ನಿಮಿತ್ತ ಮದ್ದೂರಿಗೆ ಸಚಿವರು ಆಗಮಿಸುತ್ತಿದ್ದರು. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mandya: ರೈತರ ಜಮೀನು ದಾಖಲೆಯಲ್ಲಿ ವಕ್ಫ್‌ ನಮೂದು, ಶ್ರೀರಂಗಪಟ್ಟಣ ಬಂದ್‌ಗೆ ವ್ಯಾಪಕ ಪ್ರತಿಕ್ರಿಯೆ!

ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್‌, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದಲ್ಲಿ ಒಟ್ಟು 33 ಪ್ರಯಾಣಿಕರಿಗೆ ಗಾಯವಾಗಿದೆ. ಮೂವರ ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟು ಬಿದ್ದಿದೆ. ಅಪಘಾತವಾದ ಬಸ್‌ನಲ್ಲಿ ಕೆಲ ವಿದ್ಯಾರ್ಥಿಗಳು ಇದ್ದರು ಎನ್ನುವುದು ತಿಳಿದುಬಂದಿದೆ.ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್‌, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದಲ್ಲಿ ಒಟ್ಟು 33 ಪ್ರಯಾಣಿಕರಿಗೆ ಗಾಯವಾಗಿದೆ. ಮೂವರ ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟು ಬಿದ್ದಿದೆ. ಅಪಘಾತವಾದ ಬಸ್‌ನಲ್ಲಿ ಕೆಲ ವಿದ್ಯಾರ್ಥಿಗಳು ಇದ್ದರು ಎನ್ನುವುದು ತಿಳಿದುಬಂದಿದೆ.

ಮಂಡ್ಯ: ಅನಕ್ಷರಸ್ಥೆಗೆ ಸಹಾಯಕ ಪೋಸ್ಟ್‌ಮಾಸ್ಟರ್‌ ಹುದ್ದೆ, 10 ಲಕ್ಷ ದೋಚಿದ ಮಗ!