ಮಂಡ್ಯ(ಮಾ.05): ಪರಸ್ಪರ ಪ್ರೀತಿಸಿ ವಿವಾಹಿತರಾಗಿ ಸಂಸಾರ ಮಾಡಿ ಪತ್ನಿಯನ್ನೇ ಗೆಳೆಯನ ಜೊತೆ ಮಲಗಲು ಹೇಳಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಪತಿಯ ನಡೆಯಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಮತ್ತು ಕುಟುಂಬ ಕಿರುಕುಳದಿಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (26) ನೇಣಿಗೆ ಶರಣಾದ ಗೃಹಿಣಿ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಗೃಹಿಣಿ ಆರು ವರ್ಷಗಳ ಹಿಂದೆ ರಾಜು ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದರು.

ಕಾಲೇಜ್‌ ಡೇ ದಿನ ಮದ್ಯ ಸೇವನೆ: ಡಿಗ್ರಿ ವಿದ್ಯಾರ್ಥಿ ಆತ್ಮಹತ್ಯೆ

ಸುಬ್ರಹ್ಮಣ್ಯನಗರದ ಮನೆಯಲ್ಲಿ‌ ನೇಣಿಗೆ ಶರಣಾಗಿದ್ದು, ಗಂಡ ಮತ್ತು ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ ಮಂಡ್ಯದ ಮಳವಳ್ಳಿ ತಾಲೂಕಿನ ಗೌಡನಪಾಳ್ಯ ಗ್ರಾಮದವರಾಗಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]