ಕೆಆರ್‌ಎಸ್‌ ಅಣೆಕಟ್ಟು ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಕಲ್ಲು ಗಣಿಗಾರಿಕೆ  ಕಲ್ಲು ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಸಂಸದೆ ಸುಮಲತಾ ಅಂಬರೀಶ್‌

ಮಂಡ್ಯ (ಆ.18): ಕೆಆರ್‌ಎಸ್‌ ಅಣೆಕಟ್ಟು ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಸಂಸದೆ ಸುಮಲತಾ ಅಂಬರೀಶ್‌ ಮತ್ತೆ ಗಣಿ ಕದನಕ್ಕೆ ಸಜ್ಜಾಗಿದ್ದಾರೆ. 

ಮಂಡ್ಯದಲ್ಲಿ ಬುಧವಾರ (ಆ.18) ದಿಶಾ ಸಭೆ ನಡೆಯಲಿದೆ. ಸಭೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಕೈಗೊಂಡಿರುವ ಕ್ರಮಗಳಿಂದ ಮಾಹಿತಿ ಪಡೆಯಲಿದ್ದಾರೆ.

ಅಕ್ರಮ ಗಣಿಗಾರಿಕೆಯನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ: ಸುಮಲತಾ

 ಜೊತೆಗೆ ಬೇಬಿ ಬೆಟ್ಟದಲ್ಲಿ ಬಾಂಬ್‌ ನಿಷ್ಟ್ರೀಯ ತಂಡದವರ ಕಣ್ಣಿಗೆ ಬೀಳದ ಜೀವಂತ ಸ್ಫೋಟಕಗಳು ಸಾರ್ವಜನಿಕರ ಕಣ್ಣಿಗೆ ಬಿದ್ದಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.