ಮಂಡ್ಯ(ಆ.13]: ಸಂಸದೆ ಸುಮಲತಾ ಅಂಬರೀಶ್ ಕಳೆದ ಎರಡು ದಿನಗಳಿಂದ ಮಂಡ್ಯದಲ್ಲಿಯೇ ಬೀಡು ಬಿಟ್ಟಿದ್ದಾರೆ. ಅಲ್ಲಿನ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. 

ಮಳವಳ್ಳಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಜನರ ಕುಂದುಕೊರತೆಗಳ ಬಗ್ಗೆ ಈ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಯಾಗಿದ್ದಾರೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ತಾಲೂಕು ಮಟ್ಟದ ಸಭೆಯ ಬಳಿಕ ಸುಮಲತಾ ಅಂಬರೀಶ್ ಜಿಲ್ಲಾ ಪಂಚಾಯತ್ ಸಭೆಯಲ್ಲಿಯೂ ಕೂಡ ಪಾಲ್ಗೊಳ್ಳಲಿದ್ದು, ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. 

ಲೋಕಸಭಾ ಅಧಿವೇಶನ ಮುಕ್ತಾಯದ ಬಳಿಕ ಜಿಲ್ಲೆಗೆ ಆಗಮಿಸಿರುವ ಸುಮಲತಾ ತಮ್ಮ ಕ್ಷೇತ್ರದ ಜನರ ಸಮಸ್ಯೆಗಳ ನಿವಾರಣೆಯತ್ತ ಗಮನ ಹರಿಸಿದ್ದಾರೆ.