ಹಿಂದೂಗಳ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮುಸ್ಲಿಮರ ಗುಂಪು; ಸರ್ಕಾರದಿಂದ ಪಿಎಸ್‌ಐ ಸಸ್ಪೆಂಡ್

ಮಂಡ್ಯದ ಬೆಳ್ಳೂರಿನಲ್ಲಿ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮನೆಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಲಾಗಿದೆ. 

Mandya Muslims Deadly attack on Hindu house in belluru govt suspended PSI Basavaraj sat

ಮಂಡ್ಯ (ಮೇ 29): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದ ಹಿಂದೂ ಯುವಕರ ಮನೆಗೆ ನುಗ್ಗಿ ಮುಸ್ಲಿಮರ ಗುಂಪು ಮಾರಣಾಂತಿಕ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬೆಳ್ಳೂರು ಠಾಣೆ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಲಾಗಿದೆ.

ಹೌದು, ಕೇವಲ ಕಾರನ್ನು ಓವರ್ ಟೇಕ್ ಮಾಡಿದ್ದಕ್ಕಾಗಿಯೇ ಮನೆವರೆಗೂ ಹಿಂಬಾಲಿಸಿಕೊಂಡು ಬಂದು ಎಚ್ಚರಿಕೆ ನೀಡಿ ನಿಮಗೆ ಹಲ್ಲೆ ಮಾಡುತ್ತೇವೆ ಎಂದು ಮುಸ್ಲಿಂ ಯುವಕರ ಗುಂಪೊಂದು ಹಿಂದೂ ಕುಟುಂಬಕ್ಕೆ ಎಚ್ಚರಿಕೆ ನೀಡಿತ್ತು. ಈ ವೇಳೆ ಮುಸ್ಲಿಮರ ನಾಲ್ವರ ಗುಂಪನ್ನು ಎದುರಿಸಿ ಕಳಿಸಿದ್ದ ಹಿಂದೂ ಯುವಕ ಅಭಿಲಾಶ್ ಎನ್ನುವವನಿಗೆ ಇಂದು ನಿಮ್ಮ ಹಬ್ಬವಿದೆ, ಇಂದು ಹಬ್ಬ ಮಾಡಿ ನಂತರ ನಾವು ನಿಮಗೆ ಹಬ್ಬ ಮಾಡ್ತೀವಿ ಎಂದು ಎಚ್ಚರಿಕೆ ನೀಡಿ ಹೋಗಿದ್ದರು. ಈ ಬಗ್ಗೆ ಯುವಕ ಅಭಿಲಾಶ್ ಹಾಗೂ ಅವರ ಚಿಕ್ಕಪ್ಪ ಸೇರಿ ಬೆಳ್ಳೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಆದರೆ, ಪೊಲೀಸರು ದೂರು ದಾಖಲಿಸಿದೇ ಉಡಾಫೆ ವರ್ತನೆಯಿಂದ ವಾಪಸ್ ಕಳಿಸಿದ್ದರು.

ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರಿಂದ ಬೆದರಿಕೆ? ಗಲಾಟೆ ತಡೆಯಲು ಮುಂದಾದವರ ಮೇಲೂ ಹಲ್ಲೆ?

ಕಾರು ಓವರ್‌ಟೇಕ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಧಮ್ಕಿ ಹಾಕಿದ ಮುಸ್ಲಿಂ ಯುವಕರ ಗುಂಪು ಸುಮಾರು 10ಕ್ಕೂ ಹೆಚ್ಚು ಯುವಕರನ್ನು ಕರೆದುಕೊಂಡು ಮಾರಕಾಸ್ತ್ರಗಳನ್ನು ಹಿಡಿದು ಹಿಂದೂ ಯುವಕ ಅಭಿಲಾಷ್ ಅವರ ಮನೆಗೆ ನುಗ್ಗಿದ್ದಾರೆ. ನಂತರ ಅಭಿಲಾಷ್ ಸೇರಿ ಅವರ ಮನೆಯವರ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಅದರಲ್ಲಿಯೂ ಯುವಕ ಅಭಿಲಾಶ್ ಎನ್ನುವ ಯುವಕನನ್ನು ಮನಸೋ ಇಚ್ಛೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಭಿಲಾಷ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದೂ ಅಲ್ಲದೇ ಇತರೆ ಕೆಲವು ಹಿಂದೂಗಳ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ.

ಇನ್ನು ಈ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬೆಳ್ಳೂರು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು. ಆರೋಪಿಗಳನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದರು. ನಂತರ ಈ ಹಲ್ಲೆ ಪ್ರಕರಣದ ಗಂಭೀರತೆಯನ್ನು ಅರಿತುಕೊಂಡ ಪೊಲೀಸರು ದೂರನ್ನು ದಾಖಲಿಸಿಕೊಳ್ಳುವುದಕ್ಕೆ ಮುಂದಾದರು. ನಂತರ ಪೊಲೀಸರು 3 ಪ್ರತ್ಯೇಕ ದೂರನ್ನು ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ. ಆದರೆ, ಈ ಘಟನೆಗೂ ಮುನ್ನವೇ ಮುನ್ನೆಚ್ಚರಿಕಾ ಕ್ರಮವಾಗಿ ದೂರು ಕೊಡಲು ಬಂದರೂ ದಾಖಲಿಸದ ಪೊಲೀಸರ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಬೆಳ್ಳೂರು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಳ್ಳೂರು ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಅವರು ಆದೇಶ ಹೊರಡಿಸಿದ್ದಾರೆ.

ಹೆಚ್ಚಾದ ಮಳೆ - ಕೆಆರ್‌ಎಸ್‌ಗೆ ಹೆಚ್ಚಿದ ಒಳ ಹರಿವು

ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಮಾತನಾಡಿದ ಮಂಡ್ಯ ಎಸ್‌ಪಿ ಎನ್ ಯತೀಶ್ ಅವರು, ಗಾಯಾಳು ತಂದೆ ನೀಡಿದ್ದ ದೂರಿನ್ವಯ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಶೀಘ್ರ ಕಾನೂನು ಕ್ರಮ ಕೈಗೊಳ್ಳಲಾಗುವುದು. ದೂರು ಪಡೆಯಲು ನಿರಾಕರಿಸಿದ ಪೊಲೀಸರ ಮೇಲೂ ವಿಚಾರಣೆ ಮಾಡಲಾಗುತ್ತದೆ. ಹಲವು ವರ್ಷಗಳಿಂದ ಈ ರೀತಿಯ ಘಟನೆ ನಡೆದಿಲ್ಲ. ಬೆಳ್ಳೂರು ಪಟ್ಟಣ ಶಾಂತ ವಾತರಣದಲ್ಲಿತ್ತು. ಯಾರಾದರೂ ಕ್ರಿಮಿನಲ್ ಆಕ್ಟಿವಿಟಿಯಲ್ಲಿ ಭಾಗಿಯಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇನ್ನು ಕೆಲವರು ಪ್ರತಿದೂರು ಕೂಡ ಕೊಟ್ಟಿದ್ದಾರೆ, ಅದನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು. 

Latest Videos
Follow Us:
Download App:
  • android
  • ios