ಮಂಡ್ಯ ಮೈಶುಗರ್ ಹೊಸ ಕಾರ್ಖಾನೆಗೆ ಶೀಘ್ರ ಡಿಪಿಆರ್ ಪೂರ್ಣ; ಕೃಷಿ ಸಚಿವ ಚಲುವರಾಯಸ್ವಾಮಿ
ಮಂಡ್ಯದ ಮೈಶುಗರ್ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಲು ಶೀಘ್ರವೇ ಡಿಪಿಆರ್ ಪೂರ್ಣಗೊಳಿಸಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ಮಂಡ್ಯ (ಆ.15): ಮಂಡ್ಯದ ಮೈಶುಗರ್ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಲು ಈಗಾಗಲೇ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುತ್ತದೆ. ಇದರಂತೆ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲಾಗುತ್ತಿದ್ದು, ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಕೃಷಿ ಸಚಿವರೂ ಆಗಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ನಗರದ ಸರ್. ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮಂಡ್ಯ ನಗರದ ಮೈಶುಗರ್ ಜಾಗದಲ್ಲಿ ಹೊಸ ಕಾರ್ಖಾನೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದು, ಈ ಕುರಿತಂತೆ ಶಿಘ್ರವೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕಾರ್ಯ ಪೂರ್ಣಗೊಳ್ಳಲಿದೆ. ಇನ್ನು ಮಂಡ್ಯ ಜಿಲ್ಲೆಯ ರೈತ ಮುಖಂಡರ ಹಾಗೂ ಕಬ್ಬುಬೆಳಗಾರರ ಜೊತೆ ಸಮಾಲೋಚನೆ ನಡೆಸಿ, ಹೊಸ ಕಾರ್ಖಾನೆ ನಿರ್ಮಾಣ ಅಥವಾ ಪುನಃಶ್ಚೇತನಗೊಳಿಸುವ ಸಂಬಂಧ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಭಾರತದ ಐಟಿ ಉದ್ಯಮ ಕುಸಿತ ಭೀತಿ: ಅಮೇರಿಕದ ಸಾಫ್ಟ್‌ವೇರ್ ಪ್ರಾಜೆಕ್ಟ್‌ಗಳು ವಿಯೆಟ್ನಾಂ, ಫಿಲಿಪೈನ್ಸ್ ಪಾಲು
ಮಂಡ್ಯ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿಗೆ ಪೂರಕವಾದ ಅನೇಕ ಚಟುವಟಿಕೆಗಳನ್ನು ನಡೆಸಲು ಸೂಕ್ತವಾದ ಜಿಲ್ಲೆಯಾಗಿದೆ. ಕೃಷಿಯಲ್ಲಿ ಹೊಸ ಹೊಸ ವಿಧಾನಗಳು ಅಳವಡಿಕೆ, ವೈಜ್ಞಾನಿಕ ಉಪಕರಣಗಳ ಬಳಕೆ, ಕೃಷಿಯಲ್ಲಿ ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳನ್ನು ಉತ್ತೇಜಿಸಲು, ಅನೇಕ ಹೊಸ ವಿಷಯಗಳ ಅಧ್ಯಯನವನ್ನು ಉತ್ತೇಜಿಸುವ ಸಲುವಾಗಿ, ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಘೋಷಣೆ ಮಾಡಲಾಗಿದೆ ಎಂದರು.
ಕೆ.ಆರ್.ಎಸ್. ಅಣೆಕಟ್ಟೆಯ ಬೃಂದಾವನ ಉದ್ಯಾನವನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಆಕರ್ಷಣೆಯ ಕೇಂದ್ರವನ್ನಾಗಿ ಉನ್ನತೀಕರಿಸುವ ಸಲುವಾಗಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸುವ ಮೂಲಕ ಜನಪ್ರಿಯ ಪ್ರವಾಸಿ ತಾಣವನ್ನಾಗಿ ಮಾಡಿ, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿಸಲಾಗಿದೆ. ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ವಿಜ್ಞಾನ ಕೇಂದ್ರಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದರು.
ವಿಶ್ವೇಶ್ವರಯ್ಯ ನಾಲೆಯು 92 ವರ್ಷ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವ ಕಾರಣ ಸಮಗ್ರ ಅಚ್ಚುಕಟ್ಟು ಪ್ರದೇಶಕ್ಕೆ ಶೀಘ್ರವಾಗಿ, ಸಮರ್ಪಕವಾಗಿ ನೀರನ್ನು ಹಂಚಿಕೆ ಮಾಡುವ ದೃಷ್ಠಿಯಿಂದ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿಯನ್ನು ಕೈಗೆತ್ತುಕೊಂಡಿದ್ದು, ಸುಮಾರು ರೂ.300 ಕೋಟಿ ಅಂದಾಜು ವೆಚ್ಛದ ಕಾಮಗಾರಿಯ ಪೈಕಿ, ಶೇಕಡ 60 ರಷ್ಟು ಕಾಮಗಾರಿ ಮುಕ್ತಾಯಗೊಂಡಿರುತ್ತದೆ. ವಿಶ್ವೇಶ್ವರಯ್ಯ ನಾಲೆಯ ಅಚ್ಚು ಕಟ್ಟಿನಲ್ಲಿ ಬರುವ ಸಂಪರ್ಕ ಶಾಖಾ ನಾಲಾ, ತುರಗನೂರು ಶಾಖಾ ನಾಲಾ, ಹೆಬಕವಾಡಿ ಮತ್ತು ನಿಡಘಟ್ಟ ಶಾಖಾ ನಾಲಾಗಳನ್ನು ಆಧುನೀಕರಣ ಕಾರ್ಯ ರೂ.400 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.
ನಾನು ನಂದಿನಿ ಡೆಲ್ಲಿಗೆ ಹೊಂಟೀನಿ; ದೆಹಲಿ ಸರ್ಕಾರದಿಂದ 1 ಲಕ್ಷ ಲೀಟರ್ ನಂದಿನಿ ಹಾಲಿಗೆ ಡಿಮ್ಯಾಂಡ್!
ಮಂಡ್ಯ ಜಿಲ್ಲಾ ಆಸ್ವತ್ರೆಯಲ್ಲಿ ದಾಖಲಾಗುವ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆನೀಡಲು ʼಆಧುನಿಕ ಕ್ರಿಟಿಕಲ್ಕೇರ್ಬ್ಲಾಕ್ʼ ಅನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆ ಒದಗಿಸುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಯಲ್ಲಿʼ ಉತ್ತಮಬಪ್ರಯೋಗಾಲಯವನ್ನು ಸ್ಥಾಪಿಸಲಾಗುತ್ತಿದೆ ಎಂದರು.