ವಿಚಾರಣೆಗೆ ಬರಲು ಅಶ್ವತ್ಥ್‌ಗೆ ಮಂಡ್ಯ ಪೊಲೀಸ್ ಬುಲಾವ್?
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಆ ಸಮಯದಲ್ಲೇ ಮೈಸೂರಿನ ದೇವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಪೊಲೀಸರು ಅಶ್ವತ್ಥನಾರಾಯಣ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಮತ್ತೊಮ್ಮೆ ದೇವರಾಜ ಪೊಲೀಸ್ ಠಾಣೆಗೆ ತೆರಳಿ ಎಂ.ಲಕ್ಷ್ಮಣ್ ಮರು ದೂರು ನೀಡಿದ್ದಾರೆ. ಆ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಮಂಡ್ಯ(ಮೇ.27): ಟಿಪ್ಪು ಸುಲ್ತಾನ್‌ನನ್ನು ಹೊಡೆದು ಹಾಕಿದ ರೀತಿಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ ಎಂಬ ಹೇಳಿಕೆ ಕೊಟ್ಟಿದ್ದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.
ಫೆ.15ರಂದು ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ’ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಆ ಸಮಯದಲ್ಲೇ ಮೈಸೂರಿನ ದೇವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಪೊಲೀಸರು ಅಶ್ವತ್ಥನಾರಾಯಣ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಮತ್ತೊಮ್ಮೆ ದೇವರಾಜ ಪೊಲೀಸ್ ಠಾಣೆಗೆ ತೆರಳಿ ಎಂ.ಲಕ್ಷ್ಮಣ್ ಮರು ದೂರು ನೀಡಿದ್ದಾರೆ. ಆ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ
ಈ ದೂರಿನ ಕುರಿತು ತನಿಖೆ ನಡೆಸುವಂತೆ ಮೈಸೂರು ಪೊಲೀಸರು ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ. ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗಿದೆ.