ಮಂಡ್ಯ [ಸೆ.04]:  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ  ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಅಭಿಮಾನಿಗಳು ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕುತ್ತಿದ್ದಾರೆ. 

ರಾಮನಗರ ಜಿಲ್ಲೆಯಲ್ಲಿ ಇಂದು ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಬಸ್ ಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಲಾಗಿದೆ. ಈ ನಿಟ್ಟಿನಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಕಲ್ಪಿಸಲಾಗಿದೆ. 

 ರಾಮನಗರ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಬದಲಿ ಮಾರ್ಗ ಕಲ್ಪಿಸಲಾಗಿದೆ. ಮಂಡ್ಯ, ಮೈಸೂರು, ಮಳವಳ್ಳಿ ಮಾರ್ಗದಿಂದ ಬರುವ ಬಸ್ ಗಳಿಗೆ ಮದ್ದೂರು ಬಳಿ ಬದಲಿಯಾಗಿ ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತೆರಳಲು ವ್ಯವಸ್ಥೆ ಮಾಡಲಾಗುದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪ್ರಯಾಣಿಕರ ಹಿತದೃಷ್ಟಿಯಿಂದಾಗಿ ಸಂಚಾರ ಮಾರ್ಗ ಬದಲಾಯಿಸಿ ಮಂಡ್ಯ ಎಸ್ ಪಿ ಪರಶುರಾಮ್ ಆದೇಶ ನೀಡಿದ್ದಾರೆ.