ಮದ್ದೂರು (ಸೆ.24): ಟಿಎಪಿಸಿಎಂಎಸ್‌ ಚುನಾವಣೆಯಲ್ಲಿ 7 ಸ್ಥಾನಗಳನ್ನು ಬಿಜೆಪಿ ಪಡೆಯುವುದು ಖಚಿತ ಎಂದು ಮನ್ಮುಲ್‌ ನಿರ್ದೇಶಕ ಎಸ್‌.ಪಿ.ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಸಹಕಾರ ಸಂಘದ ನಾಮಪತ್ರ ಸಲ್ಲಿಸುವ ಮುನ್ನ ಪಟ್ಟಣದಲ್ಲಿ ಉಗ್ರನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ, ಬಿಜೆಪಿ ಸರ್ಕಾರವಿರುವುದರಿಂದ ಚುನಾವಣೆಯಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಪಕ್ಷೇತರ ಅಭ್ಯರ್ಥಿಗಳಿಗೇ ಮಣೆ ಹಾಕಿದೆ ಶಿರಾ! ಮತ್ತೆ ಮರಳುತ್ತಾ ಇತಿಹಾಸ.? ...

ಮುಂದಿನ ಗ್ರಾಮ ಪಂಚಾಯ್ತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರನ್ನು ಕಣಕ್ಕೆ ಇಳಿಸಲಾಗುವುದು. ಪಕ್ಷದ ಮುಖಂಡರು, ಕಾರ್ಯಕರ್ತರು ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ, ತಾಲೂಕು ಅಧ್ಯಕ್ಷ ಪಣ್ಣೆದೊಡ್ಡಿ ರಘು, ಮಹಿಳಾ ಘಟಕದ ಅಧ್ಯಕ್ಷೆ ರಂಜಿತಾ, ಜಿಪಂ ಸದಸ್ಯ ಮರಿಹೆಗಡೆ, ಸುಕನ್ಯಾ ಹನುಮಂತೇಗೌಡ, ಸುಚಿತ್ರ ಮನುಕುಮಾರ್‌ , ಎಪಿಎಂಸಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಲಿಂಗರಾಜು, ಶೋಭ, ಕೃಷ್ಣಪ್ಪ, ಎಂ.ಯಶ್ವಂತ್‌ , ಜಾಯೇದ್‌ ಉಲ್ಲಾಖಾನ್‌ ನಾಮಪತ್ರ ಸಲ್ಲಿಸಿದರು.