Mandya : ರಾಧಾಕೃಷ್ಣರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ

ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಕೆ.ರಾಧಾಕೃಷ್ಣ ಅವರಿಗೆ ಟಿಕೆಚ್‌ ಕೈತಪ್ಪಿರುವುದರಿಂದ ಸಹಜವಾಗಿ ಆಕ್ರೋಶವಿದೆ. ಅವರನ್ನು ಪಕ್ಷ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

Mandya : There is no question of leaving Radhakrishna snr

  ನಾಗಮಂಗಲ :  ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಕೆ.ರಾಧಾಕೃಷ್ಣ ಅವರಿಗೆ ಟಿಕೆಚ್‌ ಕೈತಪ್ಪಿರುವುದರಿಂದ ಸಹಜವಾಗಿ ಆಕ್ರೋಶವಿದೆ. ಅವರನ್ನು ಪಕ್ಷ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಕರಡಹಳ್ಳಿಯಲ್ಲಿ ಕೆಲ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಘೋಷಣೆಯಾಗಿರುವ ಅಭ್ಯರ್ಥಿಯೇ ಫೈನಲ್… ಆಗಿದೆ. ಯಾವುದೇ ಭಿನ್ನಾಭಿಪ್ರಾಯಕ್ಕೆ ಆಸ್ಪದ ನೀಡದೆ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಕೆ.ಕೆ.ರಾಧಾಕೃಷ್ಣ ಈ ಬಾರಿ ಶಾಸಕರಾಗಬೇಕೆಂಬ ಉದ್ದೇಶದಿಂದ ಕಳೆದ ಐದಾರು ವರ್ಷಗಳಿಂದ ಹೋರಾಟದ ಮೂಲಕ ಕಾರ್ಯಕರ್ತರನ್ನು ಸಂಘಟಿಸಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಹೆಚ್ಚಿನ ರೀತಿಯಲ್ಲಿ ಪಕ್ಷ ಸಂಘಟನೆ ಜೊತೆಗೆ ಕ್ಷೇತ್ರದಾದ್ಯಂತ ಪ್ರವಾಸ ನಡೆಸಿದ್ದಾರೆ. ಚುನಾವಣಾ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದ ಎಲ್ಲ ಆಕಾಂಕ್ಷಿತರಿಗೆ ಹಾಗೂ ಪಕ್ಷಕ್ಕಾಗಿ ದುಡಿಯುವ ಎಲ್ಲರಿಗೂ ಮುಂದಿನ ದಿನಗಳಲ್ಲಿ ಪಕ್ಷ ಒಂದಲ್ಲೊಂದು ರೀತಿಯ ಅವಕಾಶ ಕಲ್ಪಿಸಲಿದೆ. ಕೆ.ಕೆ.ರಾಧಾಕೃಷ್ಣ ಅವರ ಬಗ್ಗೆ ತಮಗೆ ಅಪಾರ ಗೌರವವಿದೆ. ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಮಾನವೂ ಕೂಡ ಅವರಿಗೆ ಸಿಗಲಿದೆ ಎಂದರು.

ಕೆ.ಕೆ.ರಾಧಾಕೃಷ್ಣ ಬೆಂಬಲಿಗರು, ಕಾರ್ಯಕರ್ತರು ಪಕ್ಷಕ್ಕೆ ಮುಜುಗರ ತರುವಂತಹ ಕೆಲಸ ಮಾಡಿಲ್ಲ. ಅಭ್ಯರ್ಥಿ ಬದಲಿಸಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಬದಲಾಯಿಸುವ ಆಲೋಚನೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿಸಬೇಕಿದೆ. ಆ ಕ್ಷೇತ್ರವನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸಾಕಷ್ಟುಯೋಚನೆ ಮಾಡಿ ಆಕಾಂಕ್ಷಿತರಲ್ಲಿ ಒಗ್ಗಟ್ಟು ಮೂಡಿಸಿ ಒಮ್ಮತದ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಿಕೊಡುವಂತೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ. ಹಾಗಾಗಿ ಸ್ವಲ್ಪ ತಡವಾಗುತ್ತಿದೆ. ಶೀಘ್ರದಲ್ಲಿಯೇ ಅಭ್ಯರ್ಥಿ ಹೆಸರು ಪ್ರಕಟಗೊಳ್ಳಲಿದೆ ಎಂದರು.

ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಬಿ.ಎಲ….ದೇವರಾಜು ಅವರನ್ನು ಅಭ್ಯರ್ಥಿ ಮಾಡುವಂತೆ ಸ್ಥಳೀಯ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಒಟ್ಟಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಆದ್ದರಿಂದ ಅಲ್ಲಿ ಯಾವುದೇ ಗೊಂದಲವಿಲ್ಲ. ಪಕ್ಷದ ಹೈಕಮಾಂಡ… ನಿರ್ದೇಶನದ ಮೇರೆಗೆ ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘದ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್‌ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.

ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿಯೂ ಬಹಳ ಪ್ರಬಲವಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಕಾಂಗ್ರೆಸ್‌ ಪಕ್ಷದ ಪರ ಜನಬೆಂಬಲ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಆಶ್ಚರ್ಯಕರ ರೀತಿಯಲ್ಲಿ ನಿರೀಕ್ಷೆಗೂ ಮೀರಿ ಚುನಾವಣಾ ಫಲಿತಾಂಶ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ದೊಡ್ಡಜಟಕ ಹೊಸಹಳ್ಳಿ ಗ್ರಾಮದ ಚಿಕ್ಕೇಗೌಡ ಸೇರಿದಂತೆ ಕರಡಹಳ್ಳಿ ಜೆಡಿಎಸ… ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಈ ವೇಳೆ ಗ್ರಾಪಂ ಸದಸ್ಯ ಸಿಂಗಾರಿಗೌಡ, ಮುಖಂಡರಾದ ಕೆ.ಎಸ್‌.ಕೆಂಚೇಗೌಡ, ಕೆ.ಎಂ.ರಾಮು, ಕೆ.ಬಿ.ರಾಧಾಕೃಷ್ಣ, ಧನಂಜಯ, ಟಿ.ನಂದೀಶ್‌, ಟಿ.ನಾಗರಾಜು, ಧರ್ಮೇಂದ್ರ, ಶ್ರೀನಿವಾಸ್‌, ಶಾಂತಕುಮಾರ್‌, ಕಿರಣ್‌, ರವಿ, ಚೇತನ್‌, ದೀಕ್ಷಿತ್‌, ವಿಜಯ್‌ಕುಮಾರ್‌, ಅಶೋಕ, ದಿಲೀಪ್‌, ಸುನಿಲ…, ರೇಣುಕಾಪ್ರಸಾದ್‌ ಸೇರಿದಂತೆ ಹಲವರಿದ್ದರು.

Latest Videos
Follow Us:
Download App:
  • android
  • ios