Mandya: ತಂಬಾಕು ನಿಯಂತ್ರಣ: ಜಿಲ್ಲೆಗೆ ಪ್ರಥಮ ಸ್ಥಾನ

ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಉನ್ನತ ಮಟ್ಟದಲ್ಲಿ ಅನುಷ್ಠಾನಗೊಳಿಸಿ, ನಗುವಿನಹಳ್ಳಿ, ಚಾಕಶೆಟ್ಟಿಹಳ್ಳಿ, ಚಿಕ್ಕರಸಿನಕೆರೆ ಹಾಗೂ ಮೇಲುಕೋಟೆಯನ್ನು ತಂಬಾಕು ಮುಕ್ತ ಗ್ರಾಮ ಗಳನ್ನಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆ ಉನ್ನತ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್‌.ಎಲ್‌.ನಾಗರಾಜು ಅವರು ತಿಳಿಸಿದರು.

Mandya  Tobacco control: First position for the district snr

 ಮಂಡ್ಯ :  ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಉನ್ನತ ಮಟ್ಟದಲ್ಲಿ ಅನುಷ್ಠಾನಗೊಳಿಸಿ, ನಗುವಿನಹಳ್ಳಿ, ಚಾಕಶೆಟ್ಟಿಹಳ್ಳಿ, ಚಿಕ್ಕರಸಿನಕೆರೆ ಹಾಗೂ ಮೇಲುಕೋಟೆಯನ್ನು ತಂಬಾಕು ಮುಕ್ತ ಗ್ರಾಮ ಗಳನ್ನಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆ ಉನ್ನತ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್‌.ಎಲ್‌.ನಾಗರಾಜು ಅವರು ತಿಳಿಸಿದರು.

ಅವರು ಮಂಗಳವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ತಂಬಾಕು ಘಟಕವು ಬೆಂಗಳೂರಿನ ನಿವåಾ್ಹನ್ಸ್‌ನ ಸಭಾಂಗಣದಲ್ಲಿ ಪ್ರತಿ ತಿಂಗಳು ತಮ್ಮ ಜಿಲ್ಲೆಗಳಲ್ಲಿ ತಂಬಾಕು ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಕೈಗೊಂಡಿರುವ ವಿಶೇಷ ಸಾಧನೆಗಳನ್ನು ಪ್ರದರ್ಶಿಸಲು ಏರ್ಪಡಿಸಿದ್ದ ಕಾರ್ಯಾಗಾರ ದಲ್ಲಿ ಮಂಡ್ಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು 2720 ವಿದ್ಯಾಸಂಸ್ಥೆಗಳಲ್ಲಿನ 2544 ವಿದ್ಯಾಸಂಸ್ಥೆಗಳನ್ನು ಈಗಾಗಲೇ ಅಧಿಕೃತವಾಗಿ ತಂಬಾಕು ಮುಕ್ತಗೊಳಿಸಿರುವ ಅಂಶ ಹಾಗೂ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಶಾಲಾ ಮಟ್ಟದ ಸಮನ್ವಯ ಸಮಿತಿಗಳನ್ನು ರಚಿಸಿರುವುದನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಿಂದ ಆಗಮಿಸಿ ದ್ದಂತಹ ವಿದ್ವಾಂಸರ ತಂಡ ಉತ್ತಮ ಸಾಧನೆಗಾಗಿ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ಘೋಷಿಸಿದ್ದಾರೆ ಎಂದರು.

ಕೋಟ್ಪಾ ಕಾಯ್ದೆ ಉಲ್ಲಂಘನೆ ಕುರಿತಂತೆ ಹೆಚ್ಚು ದಾಳಿ ನಡೆಸಿ ಪ್ರಕರಣಗಳನ್ನು ದಾಖಲಿಸುವುದರೊಂದಿಗೆ ಸೂಕ್ತ ದಂಡವನ್ನು ವಿಧಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಕ್ಕೆ ಶ್ರಮಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್‌.ಧನಂಜಯ್‌ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಮಾನವನ ದೇಹದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಭಿತ್ತಿಚಿತ್ರಗಳನ್ನು ಅಳವಡಿಸಲಾಗಿದೆ. ಹೀಗೆ ಜಿಲ್ಲೆಯ ಮುಂದಿನ ತಲೆಮಾರನ್ನು ತಂಬಾಕು ಮುಕ್ತಗೊಳಿಸಲು ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಕೈಗೊಂಡಿರುವ ವಿವಿಧ ಸೃಜನಾತ್ಮಕ ಕಾರ್ಯ ಚಟುವಟಿಕೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಕಾರ್ಯಾಗಾರದಲ್ಲಿ ಪ್ರದರ್ಶಿಸಿ ಜಿಲ್ಲೆಗೆ ಪ್ರಥಮ ಸ್ಥಾನ ದೊರಕಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಆರೋಗ್ಯ ಇಲಾಖೆ ಡಾ.ಭವಾನಿ ಶಂಕರ್‌, ಡಾ.ಸಂಜಯ…, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು, ವಾರ್ತಾಧಿಕಾರಿ ಎಸ್‌.ಹೆಚ್‌. ನಿರ್ಮಲಾ ಇತರರಿದ್ದರು.

ಬಾಕ್ಸ್‌:  ಸೂಕ್ತ ಕ್ರಿಯಾ ಯೋಜನೆ ರೂಪಿಸಿ

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇನ್ನೂ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಯುವ ಜನರು ಹಾಗೂ ಮಕ್ಕಳನ್ನು ತಂಬಾಕು ಚಟಕ್ಕೆ ಒಳಗಾಗದಂತೆ ನೋಡಿ ಕೊಳ್ಳಬೇಕು. 2023-24ನೇ ಸಾಲಿನಲ್ಲಿಯೂ ಸಹ ಸೂಕ್ತ ಕ್ರಿಯಾ ಯೋಜನೆಯೊಡನೆ ಎಲ್ಲಾ ತಾಲ್ಲೂಕುಗಳು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸುವಂತೆ ಎಲ್ಲಾ ಅಧಿಕಾರಿಗಳಿಗೂ ಅಪರ ಜಿಲ್ಲಾಧಿಕಾರಿ ಡಾ.ಹೆಚ್‌.ಎಲ್‌.ನಾಗರಾಜು ತಿಳಿಸಿದರು.

Latest Videos
Follow Us:
Download App:
  • android
  • ios