ಕಳೆದ ವರ್ಷ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದ ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಅಂಗಡಿ ಅವರಿಗೆ ಕೊರೋನಾ ಸೋಂಕು  ತಗುಲಿದೆ.  ಸ್ವತಃ ಮಂಗಲ ಅವರೇ  ಸ್ವಪಸ್ಟಪಡಿಸಿದ್ದಾರೆ. 

ಬೆಳಗಾವಿ (ಏ.28): ಬೆಳಗಾವಿ ಲೋಕಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ, ದಿ. ಸುರೇಶ್‌ ಅಂಗಡಿ ಪತ್ನಿ ಮಂಗಲ ಅಂಗಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಮಂಗಲ ಅವರೇ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್‌ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್‌ ಮಾಡಿಸಿಕೊಂಡು ವೈದ್ಯರ ಸಲಹೆ ಪಡೆದುಕೊಳ್ಳುವಂತೆ ಮಂಗಲ ಅಂಗಡಿ ಅವರು ವಿನಂತಿಸಿಕೊಂಡಿದ್ದಾರೆ. 

ಕೋವಿಡ್ ಅಂಕಿ-ಸಂಖ್ಯೆಯನ್ನು ಸರ್ಕಾರ ಮುಚ್ಚಿಡುತ್ತಿದ್ಯಾ? ಸ್ಪಷ್ಟನೆ ಕೊಟ್ಟ ಸುಧಾಕರ್ ..

ಲೋಕಸಭೆ ಉಪಚುನಾವಣೆ ಫಲಿತಾಂಶ ಪ್ರಕಟಗೊಳ್ಳಲು ಐದು ದಿನ ಬಾಕಿ ಇರುವಾಗಲೇ ದಿ.ಸುರೇಶ ಅಂಗಡಿ ಪತ್ನಿ ಹಾಗೂ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ ಕೊರೋನಾ ದೃಢಪಟ್ಟಿದೆ. 

ಮಂಗಲ ಅಂಗಡಿ ಕಳೆದ ಲೋಕಸಭಾ ಉಪ ಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಂಪರ್ಕಕ್ಕೆ ಬಂದಿದ್ದರು. ಮಂಗಲ ಅಂಗಡಿ ಮಾತ್ರವಲ್ಲದೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಹಲವರಿಗೆ ಸೋಂಕು ದೃಢಪಟ್ಟಿದೆ.