ದಪ್ಪಗಿದ್ದೇನೆಂದು ಮನನೊಂದು ಮಂಗಳೂರು ಎಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ತಾನು ನೋಡಲು ದಪ್ಪವಾಗಿದ್ದೇನೆಂದು ಮನನೊಂದ ಮಂಗಳೂರಿನ ಎ.ಜೆ. ಆಸ್ಪತ್ರೆ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಂಗಳೂರು (ನ.13): ತಾನು ನೋಡಲು ದಪ್ಪವಾಗಿದ್ದರಿಂದ ಕಾಲೇಜಿನಲ್ಲಿ ಸ್ನೇಹಿತರು ಅಪಹಾಸ್ಯ ಮಾಡುತ್ತಿದ್ದಾರೆಂದು ಮನನೊಂದ ವೈದ್ಯಕೀಯ (ಎಂಬಿಬಿಎಸ್) ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇಂದಿನ ಕಾಲದ ಕಾಲೇಜು ಯುವಕ-ಯುವತಿಯರು ತಮ್ಮ ಓದಿಗಿಂದ ದೇಹ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ಕೊಡುತ್ತಿದ್ದಾರೆ. ಇದು ಆರೋಗ್ಯಕರ ಹವ್ಯಾಸವಾಗಿದ್ದರೂ, ಇದಕ್ಕಾಗಿ ಮಾನಸಿಕ ಸ್ಥಿಮಿತವನ್ನು ಕಳೆದುಕೊಳ್ಳುವ ಅಗತ್ಯವಿಲ್ಲ. ಈ ಬಗ್ಗೆ ಜನಸಾಮಾನ್ಯರಿಗೆ ಆರೋಗ್ಯ ಹಾಗೂ ಜೀವವನ್ನು ಕಾಪಾಡಿಕೊಳ್ಳುವ ಬಗ್ಗೆ ಬುದ್ಧಿ ಹೇಳಬೇಕಾದ ವೈದ್ಯಕೀಯ ವಿದ್ಯಾರ್ಥಿನಿಯೇ ತಾನು ದಪ್ಪಗಿದ್ದೇನೆಂದು ಮನನೊಂದು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆ ಮುಂದಿನ ಚರಂಡಿ ವಿಚಾರಕ್ಕೆ ಪುರಸಭೆ ಸದಸ್ಯನನ್ನೇ ಮಚ್ಚಿನಿಂದ ಕೊಚ್ಚಿ ಹಾಕಿದ ಯುವಕ
ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಮಂಗಳೂರಿನ ಎ.ಜೆ. ಆಸ್ಪತ್ರೆ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಾಳೆ. ಮೃತಳನ್ನು ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಎಂದು ಹೇಳಲಾಗುತ್ತಿದೆ. ಇಂದು ಬೆಳಗ್ಗಿನ ಜಾವ 3 ಗಂಟೆ ವೇಳೆಗೆ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದಿದ್ದಾಳೆ. ತಾನು ದಪ್ಪವಾಗಿರುವುದಕ್ಕಾಗಿ ಜೀವನದಲ್ಲಿ ಹತಾಶೆಗೊಂಡಿದ್ದೇನೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದಾಳೆಂದು ತಿಳಿದುಬಂದಿದೆ. ಈ ಘಟನೆ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ದೃಢಕಾಯ ವ್ಯಕ್ತಿಯನ್ನೇ ಕಚ್ಚಿ ಕೊಂದ ಕೋತಿ: ದಾವಣಗೆರೆ (ನ.13): ರಾಜ್ಯದಲ್ಲಿ ಹುಲಿ, ಚಿರತೆ, ಕಾಡಾನೆ, ಕರಡಿ ಹಾಗೂ ಹಾವು ಕಡಿತ ಸೇರಿದಂತೆ ಇತರೆ ಕಾಡು ಪ್ರಾಣಿಗಳ ದಾಳಿಗೆ ಮನುಷ್ಯರು ಸಾವನ್ನಪ್ಪಿದ ಘಟನೆಗಳನ್ನು ನಾವು ನೋಡಿದ್ದೇವೆ. ಆದರೆ, ಈ ಪ್ರಕರಣದಲ್ಲಿ ಎಲ್ಲೆಡೆ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುವ ಕೋತಿ ದಾಳಿಗೆ ವ್ಯಕ್ತಿ ಬಲಿಯಾಗಿರುವ ದುರ್ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಹೌದು, ನಾವು ನೀವೆಲ್ಲರೂ ಅತ್ಯಂತ ಸನಿಹದಿಂದ ನೋಡಿರುವ ಅದಕ್ಕೆ ಬಾಳೆಹಣ್ಣು, ಕಡ್ಲೆಪುರಿ, ಶೇಂಗಾ ಮತ್ತಿತರ ಆಹಾರಗಳನ್ನು ಕೊಟ್ಟು ಫೋಟೋ ತೆಗೆಸಿಕೊಳ್ಳುವ ಮಂಗನ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾನೆ. ಈ ದುರ್ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಹೊನ್ನಾಳಿ ತಾಲೂಕಿನ ಅರಕೆರೆ ಎಕೆ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಗುತ್ಯಪ್ಪ ಮಂಗನ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ನಿನ್ನೆ ಮಧ್ಯರಾತ್ರಿ ಬಹಿರ್ದೆಸೆಗೆ ಹೋದಾಗ ಗುತ್ಯಪ್ಪನ ಮೇಲೆ ಕೋತಿ ದಾಳಿ ಮಾಡಿ ಕಚ್ಚಿದೆ.
ಮಂಗನ ದಾಳಿಗೆ ಬಲಿಯಾದ ವ್ಯಕ್ತಿ: ಕೈ ರಕ್ತನಾಳವನ್ನೇ ಕಚ್ಚಿತಾ ಕೋತಿ!
ರಾತ್ರಿ ವೇಳೆ ಬಹಿರ್ದೆಸೆ ಮುಗಿಸಿ ವಾಪಸ್ ಬರುವಾಗ ಕೈ ರಟ್ಟೆ ಭಾಗದಲ್ಲಿನ ರಕ್ತನಾಳದ ನರವನ್ನೇ ಕಚ್ಚಿ ಹಾಕಿದೆ. ಇದರಿಂದ ತೀವ್ರ ಗಾಯಗೊಂಡ ವ್ಯಕ್ತಿ ಗುತ್ಯಪ್ಪ ಕೂಗಿಕೊಂಡು ಮನೆಯ ಬಳಿ ಓಡಿ ಬಂದಿದ್ದಾನೆ. ಆಗ ಆತನನ್ನು ಸ್ಥಳೀಯ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಶಾಸಕ ಡಿ.ಜಿ. ಶಾಂತನಗೌಡ, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಂತ್ರಸ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಇನ್ನು ಅರಣ್ಯ ಇಲಾಖೆಯ ಸಿಸಿಎಪ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.