GDP ಯಲ್ಲಿ ಮಂಗಳೂರಿಗೆ ಎರಡನೇ ಸ್ಥಾನ: ನಳಿನ್ ಕುಮಾರ್‌ಕಟೀಲ್
ಆರ್ಥಿಕ ಪ್ರಗತಿಯ ಅಳತೆಗೋಲಾದ ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ)ಯಲ್ಲಿ ರಾಜ್ಯದಲ್ಲಿ ಮಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹರ್ಷ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರು (ಡಿ.23) : ಆರ್ಥಿಕ ಪ್ರಗತಿಯ ಅಳತೆಗೋಲಾದ ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ)ಯಲ್ಲಿ ರಾಜ್ಯದಲ್ಲಿ ಮಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹರ್ಷ ವ್ಯಕ್ತಪಡಿಸಿದರು.ನಗರದ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಾಣಿಜ್ಯ ಚಟುವಟಿಕೆಗಳು ಹೆಚ್ಚಿರುವ ಹುಬ್ಬಳ್ಳಿ ಅಥವಾ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಮೈಸೂರಿಗಿಂತಲೂ ಜಿಡಿಪಿಯಲ್ಲಿ ಮಂಗಳೂರು ಎರಡನೇ ಸ್ಥಾನದಲ್ಲಿರುವುದಕ್ಕೆ ನಾಗರಿಕರು, ಉದ್ದಿಮೆದಾರರು, ಬ್ಯಾಂಕರುಗಳು, ಛೆಂಬರ್ ಆಫ್ ಕಾಮರ್ಸ್‌ನವರು ಕಾರಣರಾಗಿದ್ದಾರೆ ಎಂದರು.
ಬ್ಯಾಂಕುಗಳ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿಗದಿತ ಗುರಿ ತಲುಪದ ಬ್ಯಾಂಕುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು, ಆ ಬ್ಯಾಂಕುಗಳಲ್ಲಿ ಸರ್ಕಾರದ ಹಣವಿದ್ದಲ್ಲಿ ಕೂಡಲೆ ತೆಗೆದು ಇತರ ಬ್ಯಾಂಕುಗಳಲ್ಲಿ ಇರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಈ ಶತಮಾನ ಭಾರತಕ್ಕೆ ಸೇರಿದ್ದು: ವೆಂಚರ್ ಕ್ಯಾಪಿಟಲ್ ಜೀನಿಯಸ್ ಬ್ರೆಂಡನ್ ರೋಜರ್ಸ್ ಭವಿಷ್ಯ
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾತನಾಡಿ, ತಲಾ ಆದಾಯ (ಪರ್ ಕ್ಯಾಪಿಟಲ್ ಇನ್‌ಕಮ್)ದಲ್ಲೂ ಮಂಗಳೂರು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದೆ. ಕೈಗಾರಿಕೆಗಳು, ಉದ್ದಿಮೆಗಳು, ಹತ್ತು ಹಲವಾರು ವಾಣಿಜ್ಯ ಚಟುವಟಿಕೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಇದು ಸಾಧ್ಯವಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಬ್ಯಾಂಕರ್ಸ್ಗಳಿಗೆ ಅಭಿನಂದನೆ ಸಲ್ಲಬೇಕೆಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ರಿಸವ್‌ರ್ ಬ್ಯಾಂಕ್ ಆಫ್ ಇಂಡಿಯಾದ ಎಜಿಎಂ ಪಿ.ಬಿಸ್ವಾಸ್, ನಬಾರ್ಡ್ ಡಿಡಿಎಂ ಸಂಗೀತಾ ಎಸ್., ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಎಂ.ಪಿ. ವೇದಿಕೆಯಲ್ಲಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಸಿದ್ಧಪಡಿಸಲಾಗದ ಸರ್ಕಾರಿ ಸೌಲಭ್ಯಗಳ ಮಾಹಿತಿಯುಳ್ಳ ‘ಗ್ಲಿಂಫ್ಸ್ ಆಫ್ ಗೌರ್ವಮೆಂಟ್ ಸ್ಪಾನ್‌ರ್ಸಡ್ ಸ್ಕಿಮ್ಸ್’ ಎಂಬ ಹೊತ್ತಿಗೆಯನ್ನು ನಳಿನ್ ಕುಮಾರ್ ಬಿಡುಗಡೆ ಮಾಡಿದರು. ನಬಾರ್ಡ್‌ನ 2023-24ನೇ ಸಾಲಿನ ಪಿಎಲ್‌ಪಿ ಪುಸ್ತಕವನ್ನು ಅನಾವರಣಗೊಳಿಸಲಾಯಿತು.
ಭಾರತದ ಜಿಡಿಪಿ ದರ ನಿರೀಕ್ಷೆ ಶೇ.6.9ಕ್ಕೇರಿಸಿದ ವಿಶ್ವಬ್ಯಾಂಕ್
ಪಿಎಂಇಜಿಪಿ (ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿಯೋಜನೆ)ಯೋಜನೆಯ ಅನುಷ್ಠಾನದಲ್ಲಿ 2021-22ನೇ ಸಾಲಿನಲ್ಲಿ ಜಿಲ್ಲೆ ರಾಜ್ಯದಲ್ಲಿ ತೃತೀಯ ಸ್ಥಾನ ಪಡೆದಿದೆ. ಆ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಲ ನೀಡಿದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಮುಖರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.