ಕೊರೋನಾ ನಿವಾರಣೆಗೆ ಶಾಸಕರಿಂದ ವಿಶೇಷ ಪೂಜೆ, ಪ್ರಾರ್ಥನೆ

ಮಹಾಮಾರಿ ಕೊರೋನಾ ಭೀತಿ ನಿವಾರಣೆಗಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.

 

Mangalore south mla vedavyas kamath offers pooja to cure coronavirus

ಮಂಗಳೂರು(ಮಾ.15): ಮಹಾಮಾರಿ ಕೊರೋನಾ ಭೀತಿ ನಿವಾರಣೆಗಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಜಗತ್ತನ್ನು ಕಾಡುತ್ತಿರುವ ಕೊರೋನಾ ಮಹಾಮಾರಿ ಭಾರತದ ವಿವಿಧ ಕಡೆಗಳಲ್ಲಿ ಹಬ್ಬುತ್ತಿರುವುದು ಆತಂಕ ಉಂಟಾಗಿದೆ. ಇತ್ತೀಚೆಗೆ ಕಲಬುರಗಿಯಲ್ಲಿ ಕೊರೆನೋ ಸೋಂಕಿನಿಂದ ಒಬ್ಬರು ಮೃತಪಟ್ಟಿರುವುದೂ ಕೂಡ ಮತ್ತಷ್ಟುಆತಂಕಕ್ಕೆ ಕಾರಣವಾಗಿದೆ ಎಂದರು.

ಮಾರಕ ಕೊರೋನಾ : ಭಾರತದಷ್ಟು ಕಾಳಜಿ ಅಮೆರಿಕದಲ್ಲೂ ಇಲ್ಲ!

ದೇಶದಲ್ಲಿ ಉಂಟಾಗಿರುವ ಕೊರೋನಾ ಭೀತಿ ದೂರವಾಗುವ ನಿಟ್ಟಿನಲ್ಲಿ ಮಂಗಳೂರಿನ ಎಲ್ಲ ದೇವಸ್ಥಾನ, ದೈವಸ್ಥಾನ, ಮಠ- ಮಂದಿರ, ಚಚ್‌ರ್‍, ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಆಡಳಿತ ಮಂಡಳಿ ಹಾಗೂ ನಾಗರಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಶನಿವಾರ ರಥಬೀದಿ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಗಿದೆ. ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಶಕೀಲಾ ಕಾವಾ, ಮನೋಹರ ಶೆಟ್ಟಿ, ಬಿಜೆಪಿ ಮುಖಂಡರು ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಇದ್ದರು.

'ಜಾರಕಿಹೊಳಿಗೆ ತಲೆ ಸರಿ ಇಲ್ಲ, ಆತನ ಬಗ್ಗೆ ಏನು ಮಾತನಾಡೋದು'

ಹಿಂದೂ ಸಂಘಟನೆಗಳ ಪ್ರಾರ್ಥನೆ: ಕೊರೋನಾ ವೈರಸ್‌ ಪರಿಹರಿಸುವ ನಿಟ್ಟಿನಲ್ಲಿ ಶನಿವಾರ ವಿಶ್ವಹಿಂದೂ ಪರಿಷತ್‌ನಿಂದ ಉಳ್ಳಾಲ ಶ್ರೀ ಸೋಮನಾಥ ದೇವಾಲಯ ಉಳ್ಳಾಲ, ಶ್ರೀಕೃಷ್ಣ ಮುಖ್ಯಪ್ರಾಣ ದೇವಸ್ಥಾನ ಕುಂಪಲ, ಶ್ರೀ ವೈದ್ಯನಾಥ ದೈವಸ್ಥಾನ ಉಳ್ಳಾಲ ಬೈಲ…, ಕೊರಗಜ್ಜ ಆದಿ ದೈವಸ್ಥಾನ ಕುತ್ತಾರ್‌ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ವಿಶ್ವಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಗೋಪಾಲ್‌ ಕುತ್ತಾರ್‌, ಹಿಂದೂ ಸಮಾಜೋತ್ಸವ ಸಮಿತಿ ಉಳ್ಳಾಲದ ಅಧ್ಯಕ್ಷ ಸುದರ್ಶನ್‌ ಶೆಟ್ಟಿನೆತ್ತಿಲಬಾಳಿಕೆ, ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ ಸಹಕಾರ್ಯದರ್ಶಿ ರವಿ ಅಸೈಗೋಳಿ, ಬಜರಂಗದಳ ಗೋರಕ್ಷ ಪ್ರಮುಖ್‌ ಗುರುಪ್ರಸಾದ್‌ ಉಳ್ಳಾಲ, ದುರ್ಗಾವಾಹಿನಿ ಪ್ರಮುಖ್‌ ಗೌಶಿತ ಕುತ್ತಾರ್‌, ಉಳ್ಳಾಲ ಪ್ರಖಂಡ ಪ್ರಮುಖರಾದ ಶೈಲೇಶ್‌ ಅಡ್ಕ, ಚೇತನ್‌ ಅಸೈಗೋಳಿ, ನವೀನ್‌ ಕೊಣಾಜೆ, ಶಿವಪ್ರಸಾದ್‌ ಕೊಣಾಜೆ ಇದ್ದರು.

ಇಂದು ಕದ್ರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಕೊರೋನಾ ಶಮನಕ್ಕಾಗಿ ಮಾ.15ರಂದು ಬೆಳಗ್ಗೆ 6ರಿಂದ ಕದ್ರಿ ಶ್ರೀ ಮಂಜುನಾಥ ದೇವಳದ ಪ್ರಾಂಗಣದಲ್ಲಿ ಧನ್ವಂತರಿ ಪಾರಾಯಣ, ರುದ್ರ ಪಠಣ, ವಿಷ್ಣು ಸಹಸ್ರನಾಮ ಹಾಗೂ 7.15ಕ್ಕೆ ಸಾಮೂಹಿಕ ಪ್ರಾರ್ಥನೆ ನೆರವೇರಲಿದೆ.

ಧಾರ್ಮಿಕ, ಸಾಮಾಜಿಕ ಪ್ರಮುಖರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಎಲ್ಲರೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Latest Videos
Follow Us:
Download App:
  • android
  • ios