Asianet Suvarna News Asianet Suvarna News

ನೇತ್ರಾವತಿಗೆ ಮತ್ತೊಬ್ಬ ಆಹುತಿ: ಸಿದ್ಧಾಥ್‌ ಹೆಗ್ಡೆ ಆತ್ಮಹತ್ಯೆ ಸ್ಥಳದಲ್ಲಿಯೇ ನದಿಗೆ ಹಾರಿದ ಯುವಕ

ಮಂಗಳೂರಿನ ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಸೇತುವೆಗೆ ಬಂದು ನದಿಗೆ ಹಾರುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಫೆ ಕಾಫಿ ಡೇ ಸಿದ್ಧಾರ್ಥ್ ಆತ್ಮಹತ್ಯೆ ಪ್ರಕರಣ ನಂತರ ಸೇತುವೆ ಬಳಿ ಸುರಕ್ಷತೆ ಬಗ್ಗೆ ಒತ್ತು ನೀಡಲಾಯಿತಾದರೂ ಇದೀಗ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Mangalore youth commits suicide in Netravathi bridge
Author
Bangalore, First Published Jan 3, 2020, 9:39 AM IST
  • Facebook
  • Twitter
  • Whatsapp

ಮಂಗಳೂರು(ಜ.03): ಮಂಗಳೂರಿನ ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಸೇತುವೆಗೆ ಬಂದು ನದಿಗೆ ಹಾರುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಫೆ ಕಾಫಿ ಡೇ ಸಿದ್ಧಾರ್ಥ್ ಆತ್ಮಹತ್ಯೆ ಪ್ರಕರಣ ನಂತರ ಸೇತುವೆ ಬಳಿ ಸುರಕ್ಷತೆ ಬಗ್ಗೆ ಒತ್ತು ನೀಡಲಾಯಿತಾದರೂ ಇದೀಗ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳೂರಿನ ನೇತ್ರಾವತಿ ಸೇತುವೆಗೆ ಮತ್ತೊಬ್ಬ ಆಹುತಿಯಾಗಿದ್ದಾನೆ. ಬೆಳ್ಳಂಬೆಳಗ್ಗೆ ಬೈಕ್ ನಿಲ್ಲಿಸಿ ಸೇತುವೆಯಿಂದ ನದಿಗೆ ಹಾರಿದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಳ್ಳಾಲಬೈಲು ನಿವಾಸಿ ನವೀಶ್ ಕೊಟ್ಟಾರಿ (28) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸಿದ್ಧಾರ್ಥ ಹೆಗ್ಡೆ ಆತ್ಮಹತ್ಯೆ ಜಾಗದಲ್ಲಿಯೇ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಯತ್ನ

ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಮಂಗಳೂರಿನ ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಘಟನ ನಡೆದಿದೆ. ಕಾಫಿ ಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಯಲ್ಲೇ ಯುವಕನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಿದ್ಧಾರ್ಥ್‌ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ಸೇತುವೆಗೆ ರಕ್ಷಣಾ ಗೋಡೆ..?

Follow Us:
Download App:
  • android
  • ios