ಮಂಗಳೂರು ದಸರಾ ಮೆರವಣಿಗೆ: ನಾಳೆ ಸಂಚಾರಕ್ಕೆ ಬದಲಿ ವ್ಯವಸ್ಥೆ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆ ಅ.5ರಂದು ಅದ್ಧೂರಿಯಾಗಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅ.5ರಂದು ಮಧ್ಯಾಹ್ನ 2 ಗಂಟೆಯಿಂದ ಅ.6ರ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

Mangaluru dasar  procession Alternative arrangements for trafficrav

ಮಂಗಳೂರು (ಅ.4) : ನಗರದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆ ಅ.5ರಂದು ಅದ್ಧೂರಿಯಾಗಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅ.5ರಂದು ಮಧ್ಯಾಹ್ನ 2 ಗಂಟೆಯಿಂದ ಅ.6ರ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

ನವರಾತ್ರಿ ವೈಭವ: ಕುದ್ರೋಳಿ ಕಣ್ತುಂಬಿಕೊಳ್ಳಿ

ವಿವರ ಇಂತಿದೆ: ಕೊಟ್ಟಾರ ಚೌಕಿ ಜಂಕ್ಷನ್‌ ಮುಖಾಂತರ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ಈ ವಾಹನಗಳು ಕುಂಟಿಕಾನ, ಕೆ.ಪಿ.ಟಿ, ನಂತೂರು ಮಾರ್ಗವಾಗಿ ನಗರ ಪ್ರವೇಶಿಸುವುದು. ನಗರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮುಖೇನ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಗರದಿಂದ ಲಾಲ್‌ಬಾಗ್‌ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕೆ.ಎಸ್‌. ರಾವ್‌ ರಸ್ತೆಯಿಂದ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಿ.ವಿ.ಎಸ್‌ ಮಾರ್ಗವಾಗಿ ಬಂಟ್ಸ್‌ ಹಾಸ್ಟೆಲ್‌ ಮೂಲಕ ಸಂಚರಿಸಬೇಕು. ಅಂಬೇಡ್ಕರ್‌ ಸರ್ಕಲ್‌ ಮೂಲಕ ಎಂ.ಜಿ ರಸ್ತೆಗೆ ಸಾಗುವ ವಾಹನಗಳು ಬಂಟ್ಸ… ಹಾಸ್ಟೆಲ್‌ನಿಂದ ಸಂಚರಿಸುವುದು.

ನ್ಯೂ ಚಿತ್ರಾ ಜಂಕ್ಷನ್‌ನಿಂದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಸಂಚರಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ನ್ಯೂ ಚಿತ್ರಾ ಜಂಕ್ಷನ್‌ನಿಂದ ಕಂಡತ್ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಟ, ಸುಲ್ತಾನ್‌ ಬತ್ತೇರಿ ಮೂಲಕ ಉರ್ವ ಮಾರ್ಕೆಟ್‌ ಮಾರ್ಗವಾಗಿ ನಗರದಿಂದ ಹೊರ ಹೋಗುವುದು ಹಾಗೂ ನ್ಯೂ ಚಿತ್ರಾ ಜಂಕ್ಷನ್‌ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್‌, ರಾಷ್ಟ್ರಕವಿ ಎಂ. ಗೋವಿಂದ ಪೈ ವೃತ್ತ, ಪಿವಿಎಸ್‌ ಮಾರ್ಗವಾಗಿ ಮುಂದುವರಿದು ಬಂಟ್ಸ… ಹಾಸ್ಟೆಲ್‌ ಕಡೆಗೆ ಸಂಚರಿಸುವುದು.

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉರ್ವಾಸ್ಟೋರ್‌ ಕಡೆಯಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರಕ್ರಾಸ್‌, ಕಾಪಿಕಾಡು, ಕೆಎಸ್‌ಆರ್‌ಟಿಸಿ, ಬಿಜೈ ಮಾರ್ಕೆಟ್‌ ಜಂಕ್ಷನ್‌ ಮೂಲಕ ಸಂಚರಿಸುವುದು.

ಕೆಎಸ್‌ಆರ್‌ಟಿಸಿ ಜಂಕ್ಷನ್‌ ಕಡೆಯಿಂದ ಎಂ.ಜಿ. ರಸ್ತೆಗೆ (ಲಾಲ್‌ಬಾಗ್‌ ಜಂಕ್ಷನ್‌ ಕಡೆಗೆ) ಹಾಗೂ ಬಿಜೈ ಮಾರ್ಕೆಟ್‌ ಜಂಕ್ಷನ್‌ ಕಡೆಯಿಂದ ಕೆ.ಎಸ್‌.ಆರ್‌.ಟಿ.ಸಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆ.ಎಸ್‌.ಆರ್‌.ಟಿ.ಸಿ. ಜಂಕ್ಷನ್‌ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್‌ ಜಂಕ್ಷನ್‌ ಮೂಲಕ ಸಂಚರಿಸುವುದು. ಬಿಜೈ ಮಾರ್ಕೆಟ್‌ ಜಂಕ್ಷನ್‌ ಕಡೆಯಿಂದ ಎಂ.ಜಿ ರಸ್ತೆಗೆ (ಲಾಲ್‌ಬಾಗ್‌ ಜಂಕ್ಷನ್‌ ಕಡೆಗೆ) ಬರುವ ವಾಹನಗಳು ಕೆ.ಎಸ್‌.ಆರ್‌ಟಿ.ಸಿ. ಜಂಕ್ಷನ್‌ ಬಳಿ ‘ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್‌ ಜಂಕ್ಷನ್‌ ಕಡೆಗೆ ಸಂಚರಿಸುವುದು.

ಪಶು ಆಸ್ಪತ್ರೆ ಜಂಕ್ಷನ್‌ (ಕಪುಚಿನ್‌ ಚಚ್‌ರ್‍)ನಿಂದ ಕೋರಿರೊಟ್ಟಿಜಂಕ್ಷನ್‌ (ಎಂ.ಜಿ.ರಸ್ತೆ) ಕಡೆಗೆ ಸಾಗುವ ಎಲ್ಲ ವಾಹನ ಸಂಚಾರ ನಿಷೇಧಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣಕ್ಕೆ ಬಂದು ಹೋಗುವ ಎಲ್ಲ ಕೆಎಸ್ಸಾರ್ಟಿಸಿ ಬಸ್ಸುಗಳ ಪೈಕಿ ಪಂಪ್‌ವೆಲ್‌ ಕಡೆಗೆ ಸಂಚರಿಸುವ ಬಸ್ಸುಗಳು ಕೆ.ಪಿ.ಟಿ ಜಂಕ್ಷನ್‌ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್ಸುಗಳು ಕುಂಟಿಕಾನ ಜಂಕ್ಷನ್‌ ಮೂಲಕ ಸಂಚರಿಸುವುದು.

ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಕುದ್ರೋಳಿ ನಾರಾಯಣಗುರು ಕಾಲೇಜು ಬಳಿಯಿಂದ ನವದುರ್ಗೆಯರ ಟ್ಯಾಬ್ಲೊಗಳು ತಯಾರಿಗೊಂಡು ದೇವಸ್ಥಾನಕ್ಕೆ ಬರಲಿರುವುದರಿಂದ ಕುದ್ರೋಳಿ ನಾರಾಯಣ ಗುರು ಕಾಲೇಜು ಜಂಕ್ಷನ್‌ ರಸ್ತೆಯಿಂದ ಬರ್ಕೆ ಜಂಕ್ಷನ್‌ ತನಕ ಮತ್ತು ಬರ್ಕೆ ಜಂಕ್ಷನ್‌ನಿಂದ ದುರ್ಗಾಮಹಲ್‌ ಜಂಕ್ಷನ್‌ವರೆಗೆ ಹಾಗೂ ದುರ್ಗಾಮಹಲ್‌ ಜಂಕ್ಷನ್‌ನಿಂದ ಅಳಕೆ ಬ್ರಿv್ಜ…ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲ ಟ್ಯಾಬ್ಲೊಗಳು ಉರ್ವ ಮಾರ್ಕೆಟ್‌ ಜಂಕ್ಷನ್‌ನಿಂದ, ಗಾಂಧಿನಗರ ಮೂಲಕ ಮಣ್ಣಗುಡ್ಡ ಗುರ್ಜಿ ಜಂಕ್ಷನ್‌ನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತು ಅಲ್ಲಿಂದ ಮೆರವಣಿಗೆಯಲ್ಲಿ ಮುಂದುವರಿಯುವುದರಿಂದ ಮಣ್ಣಗುಡ್ಡ ಗುರ್ಜಿ ಜಂಕ್ಷನ್‌ನಿಂದ ಉರ್ವ ಮಾರ್ಕೆಟ್‌ ಜಂಕ್ಷನ್‌ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಮಣ್ಣಗುಡ್ಡ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ ಮತ್ತು ಗಾಂಧಿನಗರ 1ರಿಂದ 8ರವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಥಬೀದಿ ಶಾರದೆ ಶೋಭಾಯಾತ್ರೆ: ಬದಲಿ ವ್ಯವಸ್ಥೆ

ಮಂಗಳೂರು: ನಗರದ ರಥಬೀದಿ ವೆಂಕಟರಮಣ ದೇವಸ್ಥಾನದ ಶಾರದಾ ಮೂರ್ತಿಯ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಅ.6ರ ಸಂಜೆ 6 ಗಂಟೆಯಿಂದ ಅ.7ರ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಬಾಲಾಜಿ ಜಂಕ್ಷನ್‌ನಿಂದ ರಥಬೀದಿ ವೆಂಕಟರಮಣ ದೇವಸ್ಥಾನದ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನಗಳು ಬಾಲಾಜಿ ಜಂಕ್ಷನ್‌ನಿಂದ ಲೋವರ್‌ ಕಾರ್‌ಸ್ಟ್ರೀಟ್‌, ಅಜೀಜುದ್ದೀನ್‌ ರಸ್ತೆಯ ಮುಖಾಂತರ ಸಂಚರಿಸುವುದು.

ಮಂಗಳೂರು ದಸರಾ 2022: ಕುದ್ರೋಳಿಯಲ್ಲಿ ಶಾರದೆ, ನವದುರ್ಗೆಯರ ಪ್ರತಿಷ್ಠಾಪನೆ

ಗಣಪತಿ ಹೈಸ್ಕೂಲ್‌ ರಸ್ತೆ ಜಂಕ್ಷನ್‌ ಮುಖಾಂತರ ರಥಬೀದಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ವಾಹನಗಳು ತಾರಾ ಕ್ಲಿನಿಕ್‌ ಮುಂದುಗಡೆಯಿಂದ ಶರವು ದೇವಸ್ಥಾನದ ಎದುರಿನಿಂದಾಗಿ ಕೆ.ಎಸ್‌. ರಾವ್‌ ರಸ್ತೆ ಮುಖೇನ ಸಂಚರಿಸುವುದು. ಕೇಂದ್ರ ಮಾರುಕಟ್ಟೆಯಿಂದ ರಥಬೀದಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಈ ವಾಹನಗಳು ಕೇಂದ್ರ ಮಾರುಕಟ್ಟೆರಸ್ತೆಯಲ್ಲಿ ಸಂಚರಿಸಿ ಕ್ಲಾಕ್‌ ಟವರ್‌ ಮುಖೇನ ಮುಂದುವರಿಯುವುದು ಹಾಗೂ ಮೆರವಣಿಗೆ ಸಾಗುವ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios