ಮಂಗಳೂರು-ಕಾಸರಗೋಡು ಬಸ್ ಸಂಚಾರ ಸ್ಥಗಿತ: ದ.ಕ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ
* ಕೇರಳದಲ್ಲಿ ಕೊರೋನಾ ಕೇಸ್ ಸಂಖ್ಯೆಯಲ್ಲಿ ಹೆಚ್ಚಳ
* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ
* ಮಂಗಳೂರು-ಕಾಸರಗೋಡು ಬಸ್ ಸಂಚಾರ ಸ್ಥಗಿತ
ಮಂಗಳೂರು, (ಜು.31): ಕೇರಳದಲ್ಲಿ ಕೊರೋನಾ ಪಾಸಿಟಿವ್ ಕೇಸ್ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಯಲ್ಲಿ ಮಂಗಳೂರು-ಕಾಸರಗೋಡು ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಒಂದು ವಾರಗಳ ಕಾಲ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧರಿಸಲಾಗಿದೆ. ಕೊವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ನಾಳೆಯಿಂದ ಅಂದ್ರೆ ಆ.01ರಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಆಗಲಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸೇರಿ ಯಾವುದೇ ಬಸ್ ಸಂಚಾರ ಇರುವುದಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನ ನಡೆಸುವಂತಿಲ್ಲ. ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಲಾಗುವುದು. ಮದುವೆ ಕಾರ್ಯಕ್ರಮಗಳಿಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ನಿಯಮ ಉಲ್ಲಂಘಿಸಿದರೆ ಮಾಲೀಕರ ಮೇಲೆ ಎಫ್‌ಐಆರ್ ದಾಖಲಿಸಲಾಗುವುದು.
ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ವಿದ್ಯಾರ್ಥಿ ನಿಲಯಗಳಲ್ಲಿಯೇ 1 ವಾರ ಕ್ವಾರಂಟೈನ್ ಮಾಡಬೇಕಿದೆ. ಕುಟುಂಬದಲ್ಲಿ ಇಬ್ಬರಿಗಿಂತ ಹೆಚ್ಚಿನವರಿಗೆ ಸೋಂಕು ಕಂಡುಬಂದರೆ ಅಂತಹ ಮನೆ ಕಂಟೈನ್‍ಮೆಂಟ್ ಝೋನ್ ಎಂದು ಘೋಷಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ