Asianet Suvarna News Asianet Suvarna News

ಮಂಗಳೂರು ರಸ್ತೇಲಿ ನಮಾಜ್ ಮಾಡಿದವರ ಖುಲಾಸೆ, ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಎಫ್‌ಐಆರ್

ಮಂಗಳೂರಿನಲ್ಲಿ ರಸ್ತೆಯಲ್ಲಿ ನಮಾಜ್ ಮಾಡಿದವರು ತಪ್ಪು ಮಾಡಿಲ್ಲವೆಂದು ಖುಲಾಸೆಗೊಳಿಸಿದ ಸರ್ಕಾರ, ಈ ಬಗ್ಗೆ ಪ್ರಶ್ನೆ ಮಾಡಿದ ಹಿಂದೂ ಕಾರ್ಯಕರ್ತನ ಮೇಲೆ ಎಫ್‌ಐಆರ್ ದಾಖಲಿಸಿದೆ.

Mangaluru middle of road namaz done muslims get relief but FIR against Hindu activist sat
Author
First Published May 30, 2024, 10:39 PM IST

ದಕ್ಷಿಣ ಕನ್ನಡ (ಮೇ 30): ಮಂಗಳೂರಿನ ಕಂಕನಾಡಿ ಮಸೀದಿ ರಸ್ತೆಯಲ್ಲಿ ನಮಾಜ್ ವಿವಾದಕ್ಕೆ ಸಂಬಂಧಿಸಿದಂತೆ ನಮಾಜ್ ಮಾಡಿದವರಿಂದ ಯಾವುದೇ ತಪ್ಪು ಆಗಿಲ್ಲವೆಂದು ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಿ ಖುಲಾಸೆಗೊಳಿಸಿದೆ. ಆದರೆ, ಈ ಬಗ್ಗೆ ಪ್ರಶ್ನೆ ಮಾಡಿ, ಸಂದೇಶ ಹಂಚಿಕೊಂಡಿದ್ದ ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಹೌದು, ಇದೆಂಥಾ ಲೋಕವಯ್ಯಾ.. ಎಂಬ ಹಾಡು ನಿಮಗೆ ನೆನಪಿರಬೇಕಲ್ಲವೇ..? ಈಗ ಇದೆಂಥಾ ಸರ್ಕಾರವಯ್ಯಾ..? ಎಂಬ ಪ್ರಶ್ನೆಯೂ ಕೂಡ ಹುಟ್ಟಿಕೊಳ್ಳುವಂತಾಗಿದೆ. ಮಂಗಳೂರಿನ ಕಂಕನಾಡಿ ಮಸೀದಿಯ ರಸ್ತೆಲ್ಲಿ ಕೆಲವು ಮುಸ್ಲಿಂ ಯುವಕರು ಸೇರಿಕೊಂಡು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ ರಸ್ತೆಯನ್ನು ನಮಾಜ್ ಮಾಡುವುದಕ್ಕೆ ಬಳಕೆ ಮಾಡಿಕೊಂಡಿದ್ದರು. ಪ್ರಾರ್ಥನೆ ಮಾಡಲು ಮುಂದಾಗಿದ್ದರಿಂದ ಸಾರ್ವಜನಿಕರು ಕೂಡ ಅವರಿಗೆ ತೊಂದರೆ ಕೊಡದೇ ಸುಮ್ಮನಿದ್ದರು. ಪ್ರಾರ್ಥನೆ ಮಾಡುವ ವೇಳೆ ಈ ರಸ್ತೆಯಲ್ಲಿ ಹೋಗುತ್ತಿದ್ದ ಹಲವರು ವಾಹನ ತಿರುಗಿಸಿಕೊಂಡು ಬೇರೊಂದು ರಸ್ತೆಯನ್ನು ಬಳಸಿಕೊಂಡು ಹೋಗಿದ್ದರು.

ನಡುರಸ್ತೆಯಲ್ಲೇ ನಮಾಜ್ ಪ್ರಕರಣ; ವಿಹೆಚ್‌ಪಿ, ಬಜರಂಗದಳದಿಂದ ಪೊಲೀಸ್ ಠಾಣೆಗೆ ದೂರು

ಆದರೆ, ಕಾನೂನಾತ್ಮಕವಾಗಿ ಸಾರ್ವಕನಿಕರು ಬಳಸುವ ರಸ್ತೆಯನ್ನು ಪೊಲೀಸರ ಅನುಮತಿ ಇಲ್ಲದೇ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳ ಅನುಮತಿ ಇಲ್ಲದೇ ಏಕಾಏಕಿ ಬಳಸಿಕೊಂಡು ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿದ್ದರು ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದರು. ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 341, 283, 143 ಹಾಗೂ 149ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಮುಸ್ಲಿಂ ಸಮುದಾಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಆಕ್ಷೇಪದ ಬೆನ್ನಲ್ಲೇ 'ಬಿ' ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ.

ಮಂಗಳೂರಿನ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ನಮಾಝ್ ಮಾಡಿದವರ ಉದ್ದೇಶ ಸಾರ್ವಜನಿಕರ ಸಂಚಾರಕ್ಕೆ ಅಡೆತಡೆ ಮಾಡುವುದಾಗಿರಲಿಲ್ಲ ಎಂದು ಮಂಗಳೂರು ಪೊಲೀಸರು ನ್ಯಾಯಾಲಯಕ್ಕೆ ನಮಾಜ್ ವಿವಾದದ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ನಮಾಜ್ ಮಾಡಿದವರೆಲ್ಲರನ್ನೂ ಆರೋಪ ಮುಕ್ತರನ್ನಾಗಿ ಮಾಡಿ ಖುಲಾಸೆಗೊಳಿಸಲಾಗಿದೆ. ಇನ್ನು ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೇ ಸೊಮೊಟೋ ಕೇಸ್ ದಾಖಲಿಸಿದ ಕದ್ರಿ ಠಾಣೆಯ ಪೊಲೀಸ್ ನಿರೀಕ್ಷಕರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿದೆ. ಜೊತೆಗೆ ಎ.ಸಿ.ಪಿ ದರ್ಜೆಯ ಅಧಿಕಾರಿ ಮೂಲಕ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದೆ. ಈ ಬಗ್ಗೆ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ನಡುರಸ್ತೆಯಲ್ಲೇ ನಮಾಜ್‌ಗೆ ಕುಳಿತ ಯುವಕರು; ವಾಹನ ಮುಂದೆ ಸಾಗದೇ ಯೂಟರ್ನ್!

ಪ್ರಶ್ನೆ ಮಾಡಿದ ಹಿಂದೂ ಕಾರ್ಯಕರ್ತನ ವಿರುದ್ಧ ಎಫ್‌ಐಆರ್: ಮಂಗಳೂರಿನ ರಸ್ತೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ ನಮಾಜ್ ಮಾಡಿದ್ದನ್ನು ಪ್ರಶ್ನೆ ಮಾಡಿದ ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್ ಅವರು ಬಜರಂಗದಳದಿಂದಲೂ ಹನುಮಾನ್ ಚಾಲೀಸಾ ಪಠಣ ಮಾಡಿದರೂ ಪೊಲೀಸರು ಸುಮ್ಮನಿರುತ್ತೀರಾ ಎಂದು ಪ್ರಶ್ನೆ ಮಾಡಿದ್ದರು. ಮುಂದುವರೆದು, ಮುಂದಿನ ಶುಕ್ರವಾರವೂ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಿದಲ್ಲಿ ಬಜರಂಗದಳಿದಂದ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಾಗುವುದು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರಚೋನದಕಾರಿ ಸಂದೇಶ ಹಾಕಿದ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ.

Latest Videos
Follow Us:
Download App:
  • android
  • ios