ಮಂಗಳೂರು (ಸೆ.17): ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಪ್ಲಾಸ್ಮಾ ದಾನ ಮಾಡಿದ್ದಾರೆ.

ಮಂಗಳೂರಿನ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿದ್ದಾರೆ.

ಕೊರೋನಾ  ರೋಗಿಯೊಬ್ಬರಿಗೆ ಪ್ಲಾಸ್ಮಾ ದಾನ ಮಾಡಿದ್ದಾರೆ. ಕಳೆದ ಜುಲೈ 2 ರಂದು ಕೊರೋನಾ ಪಾಸಿಟಿವ್ ಆಗಿದ್ದ ಭರತ್ ಶೆಟ್ಟಿ  ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆದುಕೊಂಡಿದ್ದರು. 

ಕರ್ನಾಟಕದಲ್ಲಿ ಬುಧವಾರ ಕೊರೋನಾ ಮಹಾಸ್ಪೋಟ: ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ ...

ವಾರದ ಹಿಂದಷ್ಟೇ ಸಂಪೂರ್ಣವಾಗಿ ಗುಣಮುಖರಾಗಿದ್ದ ಭರತ್ ಶೆಟ್ಟಿ ಇದೀಗ ರೋಗಿಯೊಬ್ಬರಿಗೆ ಪ್ಲಾಸ್ಮಾ ದಾನ ಮಾಡಿದ್ದಾರೆ. 

ಈಗಾಗಲೇ ಕುಣಿಗಲ್ ಶಾಸಕ ಡಾ. ರಂಗನಾಥ್ ಕೂಡ ಪ್ಲಾಸ್ಮಾ ದಾನ ಮಾಡಿದ್ದರು. ಇದೀಗ ಶಾಸಕ ಭರತ್ ಶೆಟ್ಟಿ ಕುಡ ಪ್ಲಾಸ್ಮಾ ದಾನ ಮಾಡುವ ಮೂಲಕ ಜನರಿಗೆ ಮಾದರಿಯಾಗಿದ್ದಾರೆ.