ಮಂಗಳೂರು: (ಜು. 02) ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು ಶಾಸಕರೆ ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ.

ಸೋಂಕಿತರ ಸಂಪರ್ಕದಿಂದ ಕೊರೋನಾ ಬಂದಿದೆ  ಎಂದಿರುವ ಶೆಟ್ಟಿ ನಿಮ್ಮೆಲ್ಲರ ಹಾರೈಕೆ ಇರಲಿ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.  ಈಗಾಗಲೇ ಚಿಕಿತ್ಸೆ ನಡೆಯುತ್ತಿದ್ದು ಇನ್ನು ಕೆಲವು ದಿನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಗುತ್ತಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ

 ಹೊರ ಹೋದಾಗ ಮಾಸ್ಕ್ ಧರಿಸಿರಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಪದೇ ಪದೆ ಕೈ ತೊಳೆಯಿತಿ, ನಿಮ್ಮ ಜಾಗರೂಕತೆಯಲ್ಲಿ ಸದಾ ನೀವೀರಿ, ನಿಮ್ಮ ಆಪ್ತರನ್ನು ಸಂಕಷ್ಟಕ್ಕೆ ಸಿಲುಕಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ವೈರಸ್ ಆರ್ಭಟ ಮುಂದುವರಿದಿದ್ದು ದಿನೇ ದಿನೇ ಸಾವಿರ ಸಂಖ್ಯೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.