ಮಣಿಪಾಲ್ [ಡಿ.27]:  ತೀವ್ರ ಅನಾರೋಗ್ಯದಿಂದ ಮಣಿಪಾಲ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುನಿಲ್ ಬಾದ್ರಿ ನಿಧನರಾಗಿದ್ದಾರೆ. 

ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುನಿಲ್ ಬಾದ್ರಿ [42] ಅವರು ಗುರುವಾರ ಚಿಕಿತ್ಸೆ ಫಲಿಸದೇ ಮೃತಪಟ್ಟರು. 

ಪ್ರಸ್ತುತ ಮಾಹೆ ವಿಶ್ವವಿದ್ಯಾಲಯದ ಕಮ್ಯುನಿಕೇಷನ್ ವಿಭಾಗದಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.  ಹುಬ್ಬಳ್ಳಿ ಮೂಲದ ಸುನಿಲ್ ಮೈಸೂರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ,  ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದರು.  ಶಿವಮೊಗ್ಗ ಜಿಲ್ಲೆಯ ಸಾಗರದ ಎಲ್.ಬಿ.& ಎಸ್‌.ಬಿ.ಎಸ್. ಕಾಲೇಜಿನಲ್ಲಿ ಪತ್ರಿಕೋದ್ಯಮ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

ತಬಲಾ ವಾದಕರೂ ಆಗಿದ್ದ ಸುನಿಲ್ ಅನೇಕ ಬಿಡಿ ಲೇಖನಗಳನ್ನು ಬರೆದು ಪ್ರಸಿದ್ಧರಾಗಿದ್ದರು. ಸಂಗೀತ ಕ್ಷೇತ್ರವೂ ಇವರ ಮೆಚ್ಚಿನದ್ದಾಗಿತ್ತು. ಮಾಹೆ ವಿವಿಯಲ್ಲಿ ಹದಿನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸುನಿಲ್ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. 

 ಇವರ ನಿಧನಕ್ಕೆ ಅನೇಕ ಗಣ್ಯರು, ಪತ್ರಿಕೋದ್ಯಮ ವಿದ್ಯಾರ್ಥಿಗಳು, ಹಾಗೂ ಹಳೆಯ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.