ಮಣಿಪುರದಲ್ಲಿ ನಡೆದ ಘಟನೆ ಖಂಡಿಸಿ ಕೇಂದ್ರ ಹಾಗೂ ಮಣಿಪುರ ಸರ್ಕಾರದ ವೈಫಲ್ಯ ಎಂದು ಆರೋಪಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಬಂಟ್ವಾಳ (ಜು.25) :  ಚುನಾವಣೆಗೆ ಮೊದಲು ಮಣಿಪುರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಜನಾಂಗೀಯ ಘಟನೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದು, ಆದರೆ ಇತ್ತೀಚೆಗೆ ನಡೆದ ದಾರುಣ ಘಟನೆಯ ಕುರಿತು ಕಾಟಾಚಾರಕ್ಕೆ ಬರೀ 39 ಸೆಕೆಂಡ್‌್ಸ ಮಾತ್ರ ಮಾತನಾಡಿದ್ದಾರೆ. ಹೀಗಾಗಿ ಜನತೆ ಮಣಿಪುರವೂ ದೇಶದ ಭಾಗವೆಂದು ತಿಳಿದು ಮೋದಿ, ಅಲ್ಲಿನ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಅವರು ಬಿ.ಸಿ.ರೋಡಿನಲ್ಲಿ ಮಣಿಪುರದಲ್ಲಿ ನಡೆದ ಘಟನೆ ಖಂಡಿಸಿ ಕೇಂದ್ರ ಹಾಗೂ ಮಣಿಪುರ ಸರ್ಕಾರದ ವೈಫಲ್ಯ ಎಂದು ಆರೋಪಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಮಣಿಪುರ ಹಿಂಸೆಗೆ ಮತ್ತೆ ಕಲಾಪ ಭಂಗ: ಚರ್ಚೆಗೆ ಸಿದ್ಧ ಎಂಬ ಶಾ ಮನವಿಗೂ ಓಗೊಡದ ವಿಪಕ್ಷ

ಪ್ರತಿಭಟನೆಯಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಅಶ್ವಿನಿಕುಮಾರ್‌ ರೈ, ಕೆಪಿಸಿಸಿ ಸದಸ್ಯರಾದ ಪಿಯೂಸ್‌ ಎಲ….ರೋಡ್ರಿಗಸ್‌, ಚಂದ್ರಪ್ರಕಾಶ್‌ ಶೆಟ್ಟಿತುಂಬೆ, ಎಂ.ಎಸ….ಮಹಮ್ಮದ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ್‌ ಜೈನ್‌, ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌, ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದೀಪ್‌ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷ ಮದುಸೂಧನ್‌ ಶೆಣೈ, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲುಕ್ಮಾನ್‌ ಬಂಟ್ವಾಳ, ಪಾಣೆಮಂಗಳೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಇಬ್ರಾಹಿಂ ನವಾಜ…, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷರಾದ ಜಯಂತಿ ಪೂಜಾರಿ, ಲವಿನಾ ವಿಲ್ಮಾ ಮೊರಾಸ್‌, ಪ್ರಮುಖರಾದ ಕೆ.ಸಂಜೀವ ಪೂಜಾರಿ ಮೊದಲಾದವರಿದ್ದರು.

Manipur: ಒಂದಲ್ಲ.. ಎರಡಲ್ಲ.. 7 ಅತ್ಯಾಚಾರ ನಡೆದಿದೆ: ಬಗೆದಷ್ಟೂ ಬಯಲಿಗೆ ಬರ್ತಿದೆ ರೇಪ್‌ ಕೇಸ್‌!