ಮಂಡ್ಯ [ಸೆ.19]: ಮಂಡ್ಯದ ಮನ್ಮುಲ್ ರಾಜಕೀಯ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಮದ್ದೂರು ಕ್ಷೇತ್ರದಿಂದ ಮನ್ಮುಲ್ ಚುನಾವಣೆಯಲ್ಲಿ ಗೆದ್ದ ನಿರ್ದೇಶಕ ಸ್ವಾಮಿ ಇದೀಗ ಬಿಜೆಪಿಯತ್ತ ಜಿಗಿಯಲು ಸಿದ್ಧರಾಗಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದರು.

ಉಪ ಮುಖ್ಯಮಂತ್ರಿ ಅಶ್ವತ್ಥ್  ನಾತಾಯಣ್ ನೇತೃತ್ವದಲ್ಲಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಹಾಗೂ ರಮೇಶ್ ಬಾಬು ಮೂಲಕ ಮಾತುಕತೆ ನಡೆದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ನಿರ್ದೇಶಕ ಸ್ವಾಮಿ ಮತ್ತು ಶ್ರೀರಂಗಪಟ್ಟಣದ ಕಾಂಗ್ರೆಸ್ ಮುಖಂಡ ರಮೇಶ್ ಬಾಬು, ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಭೇಟಿ ಮಾಡಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.  ಮನ್ಮುಲ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಘಿರುವ ಸ್ವಾಮಿ ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಾಗಿದೆ.