Asianet Suvarna News Asianet Suvarna News

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕರ್ನಾಟಕದ ಮನೋಜ್ ನೇಮಕ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಮನೋಜ್ ಬಾಡ್ಕರ್ ಅವರು ಇಂದು ಭಾರತೀಯ ಕೋಸ್ಟ್ ಗಾರ್ಡ್‌ನ ಪಶ್ಚಿಮ ವಲಯದ ನೂತನ ಕಮಾಂಡರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. 

Manoj Baadkar Takes Over As The Commander Of Indian Coast Guard In Western Sector gvd
Author
First Published Sep 12, 2022, 9:12 PM IST

ಕಾರವಾರ (ಸೆ.12): ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಮನೋಜ್ ಬಾಡ್ಕರ್ ಅವರು ಇಂದು ಭಾರತೀಯ ಕೋಸ್ಟ್ ಗಾರ್ಡ್‌ನ ಪಶ್ಚಿಮ ವಲಯದ ನೂತನ ಕಮಾಂಡರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಂಬೈನಲ್ಲಿ ಇಂದು ನಡೆದ ಗೌರವ ವಂದನೆ ಕಾರ್ಯಕ್ರಮದಲ್ಲಿ ಇನ್ಸ್‌ಪೆಕ್ಟರ್ ಜನರಲ್ ಮನೋಜ್ ಬಾಡ್ಕರ್ ಅವರು ಭಾರತೀಯ ಕೋಸ್ಟ್ ಗಾರ್ಡ್ ಪಶ್ಚಿಮ ವಲಯದ ಕಮಾಂಡರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಮಹಾರಾಷ್ಟ್ರ, ಗೋವಾ, ಕೇರಳ, ಲಕ್ಷದ್ವೀಪ ದ್ವೀಪ ಮತ್ತು ಕರ್ನಾಟಕ ಪಶ್ಚಿಮ ಪ್ರದೇಶ ವ್ಯಾಪ್ತಿಗೆ ಈಗ ಮನೋಜ್ ಬಾಡ್ಕರ್ ಅವರು ಮುಖ್ಯಸ್ಥರಾಗಿದ್ದಾರೆ. 

ಇವರು ಕಾರವಾರದ ಸೈಂಟ್ ಜೋಸೆಫ್ ಹೈಸ್ಕೂಲ್ ಹಾಗೂ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, ಅವರು 2006ರಿಂದ 2008ರವರೆಗೆ ಕೋಸ್ಟ್ ಗಾರ್ಡ್‌ನ ಕರ್ನಾಟಕ ಮತ್ತು ಗೋವಾ ರಾಜ್ಯದ ಮುಖ್ಯಸ್ಥರಾಗಿದ್ದರು. 2013ರಿಂದ 2018ರವರೆಗೆ ದೆಹಲಿಯ ಕೋಸ್ಟ್ ಗಾರ್ಡ್ ನೇಮಕಾತಿ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡ ಅವರು, 2018ರಲ್ಲಿ ಇನ್ಸ್‌ಪೆಕ್ಟರ್ ಜನರಲ್ ಶ್ರೇಣಿಗೆ ಬಡ್ತಿ ಪಡೆದರು. ಅವರ 36 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಹಲವಾರು ಕೋಸ್ಟ್ ಗಾರ್ಡ್ ಹಡಗುಗಳು ಮತ್ತು ನಿಲ್ದಾಣಗಳಿಗೆ ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ವಿಷ್ಣುಗುಪ್ತ ವಿವಿಯಲ್ಲಿ ಅಹಿಚ್ಛತ್ರ ಕ್ಯಾಂಪಸ್‌ ಶೀಘ್ರ: ರಾಘವೇಶ್ವರ ಶ್ರೀ

ಮಣಿಪಾಲ ಎಂಐಟಿಯಲ್ಲಿ ‘ಅಕ್ಷಯ ಊರ್ಜಾ ದಿವಸ್‌’: ಇಲ್ಲಿನ ಮಣಿಪಾಲ್‌ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯು (ಎಂ.ಐ.ಟಿ.) ಇತ್ತೀಚೆಗೆ ‘ಅಕ್ಷಯ ಉರ್ಜಾ ದಿವಸ್‌’ ಆಚರಿಸಲಾಯಿತು. ಈ ಆಚರಣೆಯಲ್ಲಿ ಉಡುಪಿ ಮತ್ತು ಬ್ರಹ್ಮಾವರ ತಾಲೂಕಿ ಸರ್ಕಾರಿ ಶಾಲೆಗಳ 400 ವಿದ್ಯಾರ್ಥಿಗಳಿಗೆ ಸೌರಶಕ್ತಿ ಮತ್ತು ಹವಾಮಾನ ಬದಲಾವಣೆಯ ಭೀಕರ ಪರಿಣಾಮಗಳ ಕುರಿತು ಕಾರ್ಯಾಗಾರದ ಮೂಲಕ ಅರಿವು ಮೂಡಿಸಲಾಯಿತು. ಕಾರ್ಯಾಗಾರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸೋಲಾರ್‌ ಲ್ಯಾಂಪ್‌ ಗಳನ್ನು ಜೋಡಿಸಲು ತರಬೇತಿ ನೀಡಲಾಯಿತು. ಜೋಡಿಸಲಾದ ಸೋಲಾರ್‌ ಲ್ಯಾಂಪ್‌ ಗಳನ್ನು ಶಾಲಾ ಶಿಕ್ಷಕರೊಂದಿಗೆ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

Karnataka Politics: ಚುನಾವಣಾ ರಣಕಹಳೆ ಮೊಳಗಿಸಿದ ಹೆಬ್ಬಾರ

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್‌.ಕೆ.ಶಿವರಾಜ್‌, ಉಡುಪಿ ಶಿಕ್ಷಣಾಧಿಕಾರಿ ಜಾಹ್ನವಿ, ವಿಭಾಗೀಯ ಶಿಕ್ಷಣಾಧಿಕಾರಿ ಉಡುಪಿ ಅಶೋಕ್‌ ಕಾಮತ್‌, ಎಂಐಟಿಯ ನಿರ್ದೇಶಕ ಕಮಾಂಡರ್‌ ಡಾ. ಅನಿಲ್‌ ರಾಣಾ, ಜಂಟಿ ನಿರ್ದೇಶಕ ಡಾ. ಸೋಮಶೇಖರ ಭಟ್‌ ಭಾಗವಹಿಸಿದ್ದರು. ಕಾಲೇಜಿನ ಸಹಪ್ರಾಧ್ಯಾಪಕ ಡಾ.ನರೇಶ ಮಣಿ, ಡಾ. ಪ್ರವೀಣ್‌ ಕುಮಾರ್‌, ಡಾ. ಸುಚೇತಾ ಕೋಲೇಕರ್‌, ಡಾ. ಮೊಹಮ್ಮದ್‌ ಜುಬೇರ್‌, ಮನೋಜ್‌ ಮತ್ತು ಎಂಐಟಿ ಯ ವಿವಿಧ ವಿದ್ಯಾರ್ಥಿ ಕ್ಲಬ್‌ ಗಳು ಪದಾಧಿಕಾರಿಗಳು ಈ ಕಾರ್ಯಾಗಾರವನ್ನು ಸಂಯೋಜಿಸಿದರು. ಎಂಐಟಿಯ ಜೈವಿಕ ತಂತ್ರಜ್ಞಾನ ವಿಭಾಗದ ಡಾ.ವಿಜೇಂದ್ರ ಪ್ರಭು ನಿರೂಪಿಸಿದರು.

Follow Us:
Download App:
  • android
  • ios