Asianet Suvarna News Asianet Suvarna News

Mysuru : ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್‌

ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ರಾಜ್ಯದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಆರೋಪಿಸಿದರು.

Many BJP leaders are Congress snr
Author
First Published Dec 25, 2022, 10:07 AM IST

 ಹುಲ್ಲಹಳ್ಳಿ (ಡಿ. 25):  ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ರಾಜ್ಯದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಆರೋಪಿಸಿದರು.

ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ಚಂದ್ರೋದಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ಬಿಜೆಪಿ (BJP)  ಸರ್ಕಾರದ ದುರಾಡಳಿತದಿಂದ ರಾಜ್ಯದ ಜನತೆ ಬೆಸæತ್ತಿದ್ದಾರೆ. 4 ವರ್ಷ ಆಡಳಿತದಲ್ಲಿ ಬರಿ ಶೇ. 40 ಕಮಿಷನ್‌ ಬಿಟ್ಟರೆ ಯಾವ ಜನಪರ ಕೆಲಸವನ್ನು ಸರ್ಕಾರ ಮಾಡಿಲ್ಲ. ಕಾಂಗ್ರೆಸ್‌ ಸರ್ಕಾರದ ಸಿದ್ದರಾಮಯ್ಯ (Siddaramaiah)  ಅವರ ಆಡಳಿತದಲ್ಲಿ ಬಡಜನರ ಪರ ಒಳ್ಳೆ ಯೋಜನೆ ನೀಡಿದ್ದಾರೆ. ರಾಜ್ಯದ ಜನತೆ ಈಗಲೂ ಕಾಂಗ್ರೆಸ್‌ ಆಡಳಿತವನ್ನು ರಾಜ್ಯದ ಜನತೆಯು ಕಾಯುತ್ತಿದ್ದಾರೆ ಎಂದರು.

ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲೂ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಸ್ಥಳೀಯ ಶಾಸಕರು ರೈತರಿಗೆ ಸಾಗುವಳಿ ಪತ್ರ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ರೈತರ ಪರ ಕೆಲಸ ಮತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಈಗ ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೆಸೆತ್ತ ಯುವಕರು ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆನೆಬಲ ಬಂದಾಂತಾಗಿದೆ ಎಂದು ಅವರು ತಿಳಿಸಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಯಾವುದೇ ಭಿನ್ನಾಭಿಪ್ರಾಯಬಿಟ್ಟು ಒಗ್ಗಟಿನಿಂದ ಪಕ್ಷದ ಸಂಘಟನೆಗೆ ಹೆಚ್ಚು ನೀಡಬೇಕಿದೆ ಎಂದರು.

ಈ ವೇಳೆ 300ಕ್ಕೂ ಹೆಚ್ಚು ಬಿಎಸ್‌ಪಿ ಹಾಗೂ ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು.

ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್‌ರಾಜ…, ಬ್ಲಾಕ್‌ ಅಧ್ಯಕ್ಷರಾದ ಕೆ.ಜಿ. ಮಹೇಶ್‌, ಸಿ.ಎಂ. ಶಂಕರ್‌, ಶ್ರೀಕಂಠನಾಯಕ, ಹಿಂದುಳಿದ ವರ್ಗ ವಿಭಾಗದ ಜಿಲ್ಲಾಧ್ಯಕ್ಷ ಕೆ. ಮಾರುತಿ, ಉಸ್ತುವಾರಿ ಸೋಮೇಶ್‌, ಎಸ್ಟಿವಿಭಾಗದ ಪ್ರಧಾನ ಕಾರ್ಯದರ್ಶಿ ದೊರೆಸ್ವಾಮಿನಾಯಕ, ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ ಮಹದೇವು, ಗ್ರಾಪಂ ಸದಸ್ಯರಾದ ಕುಮಾರ್‌, ಲೋಕೇಶ್‌, ಶ್ರೀವಿದ್ಯಾ, ಕೆಪಿಪಿಸಿಸಿ ಸದಸ್ಯ ಬಸವರಾಜ…, ಮುಖಂಡರಾದ ಅಭಿನಂದನ್‌ ಪಾಟೀಲ…, ಶಿವಪ್ಪದೇವರು, ಅಶೋಕ್‌, ಅಜಯ…, ವಕೀಲ ನಾಗರಾಜ…, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ…, ಜಿಪಂ ಮಾಜಿ ಉಪಾಧ್ಯಕ್ಷ ಶಂಕರಪ್ಪ, ಹರದನಹಳ್ಳಿ ಸೋಮೇಶ್‌, ಶಿರಮಳ್ಳಿ ಗ್ರಾಪಂ ಅಧ್ಯಕ್ಷ ಮಹದೇವಶೆಟ್ಟಿ, ಎನ್‌. ಮಹದೇವು, ಬಿಳಿಶೆಟ್ಟಿಮೊದಲಾದವರು ಇದ್ದರು.

ಜೆಡಿಎಸ್ಗೆ ಲಾಭ

  ಅಥಣಿ : ನಾನು ಯಾರನ್ನು ಸೋಲಿಸಲು ಜೆಡಿಎಸ್‌ ಪಕ್ಷ ಸೇರಿಲ್ಲ, ಸ್ಥಳೀಯ ಕಾಂಗ್ರೆಸ್‌ ಮುಖಂಡರ ವರ್ತನೆ ಹಾಗೂ ಗುಂಪುಗಾರಿಕೆಗೆ ಮನನೊಂದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ. ಅಥಣಿ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲಿ ಭಿನ್ನಮತ, ಗುಂಪುಗಾರಿಕೆ ಹೆಚ್ಚಿದ್ದು, ಅದರ ಲಾಭ ನಮ್ಮ ಜೆಡಿಎಸ್‌ ಪಕ್ಷಕ್ಕೆ ದೊರಕಲಿದೆ ಎಂದು ಮಾಜಿ ಶಾಸಕ ಷಹಜಹಾನ್‌ ಡೊಂಗರಗಾಂವ ಹೇಳಿದರು.

ಪಟ್ಟಣದಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ (JDS)  ಪಕ್ಷಕ್ಕೆ ಸೇರ್ಪಡೆಗೊಂಡ ಪ್ರಯುಕ್ತ ಅಥಣಿ ಜೆಡಿಎಸ್‌ ತಾಲೂಕಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸನ್ಮಾನ, ಸ್ವೀಕರಿಸಿ ಮಾತನಾಡಿದ ಅವರು, ಸ್ಥಳೀಯ ಕಾಂಗ್ರೆಸ್‌ (congress)  ಮುಖಂಡರು ತಮ್ಮ ವೈಯಕ್ತಿಕ ಪ್ರಚಾರದಲ್ಲಿ ತೊಡಗಿದ್ದಾರೆ. ಸಮಯ ಸಂದರ್ಭ ನೋಡಿ ಕಾಲೆಳೆಯುವ ಪ್ರಯತ್ನ ಮಾಡುತ್ತಾರೆ. ಪಕ್ಷಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಹೋರಾಟ ಸಂಘಟನೆ, ಕಾರ್ಯಕ್ರಮಗಳ ಪರಿಚಯ ಮಾಡುತ್ತಿಲ್ಲ. ರಾಜಕೀಯ ಅನುಭವ ಇರುವ ನಮಗೆ ಒಂದು ಸಲಹೆ ಕೇಳುವುದಿಲ್ಲ. ಕಾರ್ಯಕ್ರಮಗಳಲ್ಲಿ ಮಾತನಾಡಲು ನನಗೆ ಅವಕಾಶ ಕೊಡುವುದಿಲ್ಲ. ಹೀಗಾಗಿ ಮನನೊಂದು ನಾನು ಕಾಂಗ್ರೆಸ್‌ ಪಕ್ಷವನ್ನು ತೊರೆದು ಜೆಡಿಎಸ್‌ ಪಕ್ಷವನ್ನು ಸೇರಿಕೊಂಡಿದ್ದೇನೆ ಎಂದು ತಮ್ಮ ಅಳಲು ತೋಡಿಕೊಂಡರು.

ಕಾಂಗ್ರೆಸ್‌ ಪಕ್ಷದಲ್ಲಿ ಈಗ ಟಿಕೆಟ್‌ಗಾಗಿ ಬಾರಿ ಪೈಪೋಟಿ ನಡೆದಿದೆ. ಯಾರಿಗೆ ಟಿಕೆಟ್‌ ಸಿಕ್ಕರೂ ಟಿಕೆಚ್‌ ಸಿಗದೇ ಇದ್ದವರೆಲ್ಲ ಸೇರಿಕೊಂಡು ಟಿಕಿಟ್‌ ಸಿಕ್ಕವರನ್ನು ಸೋಲಿಸಲು ಯತ್ನಿಸುತ್ತಾರೆ. ಇದು ಕಾಂಗ್ರೆಸ್‌ನಲ್ಲಿ ಮಾತ್ರವಲ್ಲ, ಈಗ ಬಿಜೆಪಿಯಲ್ಲಿಯೂ ಗುಂಪುಗಾರಿಕೆ ಆರಂಭವಾಗಿದೆ. ಇದರ ಲಾಭ ಖಂಡಿತವಾಗಿಯೂ ನಮ್ಮ ಜೆಡಿಎಸ್‌ ಪಕ್ಷಕ್ಕೆ ದೊರಕಲಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನ ಇನ್ನಷ್ಟುಬೇರು ಮಟ್ಟದಿಂದ ಸಂಘಟಿಸಿ ಮುಂಬರುವ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿಗಳಿದ್ದಾಗ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಅವರ ಜನಪರ ಕಾರ್ಯಗಳು ಮತ್ತು ಅಥಣಿ ಮತಕ್ಷೇತ್ರದಲ್ಲಿ ನಾನು ಶಾಸಕನಿದ್ದಾಗ ಮಾಡಿದ ಜನಪರ ಕಾರ್ಯ ಮತ್ತು ಹೋರಾಟಗಳನ್ನು ಮತದಾರರ ಗಮನಕ್ಕೆ ತರುವುದಲ್ಲದೇ ಮತಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಪ್ರಣಾಳಿಕೆ ರೂಪಿಸಿಕೊಂಡು ಮತದಾರರ ಮುಂದೆ ಹೋಗುತ್ತೇವೆ. ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ಆಡಳಿತಕ್ಕೆ ಮತದಾರರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಲಿ ಎಂಬ ಭಾವನೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದು ಶತಸಿದ್ಧ. ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷವನ್ನು ಗೆಲ್ಲಿಸುವ ಮೂಲಕ ಅವರ ಕೈ ಬಲಪಡಿಸುತ್ತೇವೆ ಎಂದು ಭರವಸೆ ನೀಡಿದರು.

Follow Us:
Download App:
  • android
  • ios