ಹುಬ್ಬಳ್ಳಿ (ಅ.29): ಬಿಜೆಪಿ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು. ಯಡಿಯೂರಪ್ಪ ಬಹಳ ದಿನ ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ್‌ ಹೊರಟ್ಟಿಹೇಳಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಿಎಂ ಬದಲಾವಣೆ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ಶಿಸ್ತಿನ ಪಕ್ಷ ಅಂತಾ ಹೇಳಿಕೊಳ್ಳುವ ಬಿಜೆಪಿ ಈವರೆಗೂ ಯತ್ನಾಳ್‌ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. 

'ಸಮ್ಮಿಶ್ರ ಸರ್ಕಾರ ಬೀಳಿಸಿದ್ದೆ ಡಿ.ಕೆ. ಶಿವಕುಮಾರ್‌' .

ಇದನ್ನು ನೋಡಿದರೆ ಬಹಳಷ್ಟು ಬಿಜೆಪಿ ನಾಯಕರ ಬೆಂಬಲ ಯತ್ನಾಳ್‌ ಅವರಿಗಿದೆ ಎನ್ನುವುದು ಸ್ಪಷ್ಟ. ಪಕ್ಷದೊಳಗಿನ ಬೆಂಕಿ ಯಾವ ಸಂದರ್ಭದಲ್ಲಾದರೂ ಹೊತ್ತಿ ಉರಿಯಬಹುದು.

ಯಾವುದೇ ಪಕ್ಷದ ಶಾಸಕರು ಮತ್ತೆ ಚುನಾವಣೆಗೆ ಹೋಗುವ ಪರಿಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಬಿಜೆಪಿ ಸರ್ಕಾರ ಬಿದ್ದರೆ ಏನು ಬೇಕಾದರೂ ಬೆಳವಣಿಗೆ ಆಗಬಹುದು. ಪರಿಷತ್‌ ಮತ್ತು ಉಪ ಚುನಾವಣೆ ಫಲಿತಾಂಶದ ನಂತರ ರಾಜಕೀಯ ಬದಲಾವಣೆಗಳು ಆಗಲಿವೆ ಎಂದು ನುಡಿದರು.