Asianet Suvarna News Asianet Suvarna News

Kolar : ಜನಪರ ಆಡಳಿತ ಮೆಚ್ಚಿ ಜೆಡಿಎಸ್‌ಗೆ ಸೇರ್ಪಡೆ

ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜನಪರ ಆಡಳಿತ ಮೆಚ್ಚಿ ಹಾಗೂ ಜೆಡಿಎಸ್‌ ಪಕ್ಷದ ತತ್ವ ಸಿದ್ಧಾಂತ ಒಪ್ಪಿಕೊಂಡು ನಿರಂತರವಾಗಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಗ್ರಾಮಗಳಿಂದ ಅನೇಕರು ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್‌ ಸೇರ್ಪಡೆ

Many People Join JDS in Kolar snr
Author
First Published Jan 6, 2023, 6:45 AM IST

ಕೋಲಾರ (ಜ. 06):  ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜನಪರ ಆಡಳಿತ ಮೆಚ್ಚಿ ಹಾಗೂ ಜೆಡಿಎಸ್‌ ಪಕ್ಷದ ತತ್ವ ಸಿದ್ಧಾಂತ ಒಪ್ಪಿಕೊಂಡು ನಿರಂತರವಾಗಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಗ್ರಾಮಗಳಿಂದ ಅನೇಕರು ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್‌ ಸೇರ್ಪಡೆಯಾಗುತ್ತಾ ಇದ್ದು ಅವರ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್‌ ತಿಳಿಸಿದರು.

ನಗರದ ಸಿಎಂಆರ್‌ ಸೇವಾ ಕೇಂದ್ರದ ಕಛೇರಿಯಲ್ಲಿ ಗುರುವಾರ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷವನ್ನು ತೊರೆದ ತಾಲೂಕಿನ ಚನ್ನಸಂದ್ರ ಗ್ರಾಪಂ ವ್ಯಾಪ್ತಿಯ ಉರಟ ಅಗ್ರಹಾರ ಗ್ರಾಮಸ್ಥರನ್ನು ಜೆಡಿಎಸ್‌ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ದೇಶದಲ್ಲಿ ಎಚ್‌.ಡಿ.ದೇವೇಗೌಡರು ಪ್ರಧಾನ ಮಂತ್ರಿಯಾಗಿ, ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜನಪರ ಆಡಳಿತ ನೀಡಿದ್ದು ಅನೇಕ ಜನೋಪಯೋಗಿ ಯೋಜನೆಗಳನ್ನು ಜನತೆ ಇನ್ನು ಮರೆತಿಲ್ಲ ಅದನ್ನು ನಂಬಿ ಮತ್ತೊಮ್ಮೆ ರಾಜ್ಯದಲ್ಲಿ ಜೆಡಿಎಸ್‌ ಪಕ್ಷಕ್ಕೆ ಅಧಿಕಾರ ಕೊಡಬೇಕು ಎಂಬುದನ್ನು ಅರ್ಥೈಸಿಕೊಂಡು ಹಲವಾರು ಜನ ಜೆಡಿಎಸ್‌ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆನೆ ಬಲ ಬಂದಿದೆ ಎಂದರು.

ಕೋಲಾರ ಜಿಲ್ಲಾ ಕೇಂದ್ರವಾಗಿದ್ದು, ಬೆಂಗಳೂರಿಗೆ ಹತ್ತಿರದಲ್ಲಿ ಇದ್ದರೂ ಸಹ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಕ್ಷೇತ್ರದ ಜನತೆಯ ಸ್ವಾಭಿಮಾನ ಬದುಕಿಗೆ ಕಂಕಣಬದ್ದನಾಗಿ ದುಡಿಯಲು ನನ್ನನ್ನು ಜೆಡಿಎಸ್‌ ಅಭ್ಯರ್ಥಿಯಾಗಿ ಕುಮಾರಣ್ಣ ಆಯ್ಕೆ ಮಾಡಿದ್ದಾರೆ. ನಿಮ್ಮ ಸಲಹೆ ಸೂಚನೆಗಳನ್ನು ಪಡೆದು ನಿಮ್ಮ ಸೇವೆ ಮಾಡುತ್ತೇನೆ. ಕ್ಷೇತ್ರದಲ್ಲಿ ಸಿಎಂಆರ್‌ ಶ್ರೀನಾಥ್‌ ಗೆದ್ದರೆ ನೀವು ಗೆದ್ದಂತೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಮಾಡುತ್ತೇನೆ, ಒಗ್ಗಟ್ಟಿನಿಂದ ಗ್ರಾಮದ ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿ ಎಂದರು.

 ಟಿಕೆಟ್ ನಿರ್ಧಾರ ಜನರದ್ದು

ಮಾನ್ವಿ (ಡಿ.30): ಜೆಡಿಎಸ್‌ ಅಭ್ಯರ್ಥಿ ಯಾರು ಹಾಗೂ ಯಾರಿಗೆ ಟಿಕೆಟ್‌ ನೀಡಬೇಕು ಎನ್ನುವುದನ್ನು ಜನರು ತೀರ್ಮಾನಿಸುತ್ತಾರೆ. ಯಾರಿಗೆ ಬಿ ಫಾರ್ಮ್‌ ನೀಡಬೇಕು ಎಂದು ನಾನು ನಿರ್ಧರಿಸುತ್ತೇನೆ. ಮುಂಬರುವ 2023ರ ಚುನಾವಣೆಯಲ್ಲಿ ಜೆಡಿಎಸ್‌ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಠನೆ ನೀಡಿದರು. ಪಟ್ಟಣದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸಹೋದರ ರಾಜಾ ರಾಮಚಂದ್ರ ನಾಯಕರ ಮದುವೆ ಆರತಕ್ಷತೆ ಮತ್ತು ಸಾಮೂಹಿಕ ವಿವಾಹಗಳ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.

ಜೆಡಿಎಸ್‌ ಬಿ ಫಾರ್ಮ್‌ ಕೊಡುವರು ಯಾರು?, ಬಿ ಫಾರ್ಮ್‌ ಕೊಡುವುದು ನಾನು, ನಿಖಿಲ್‌ ಕುಮಾರಸ್ವಾಮಿ ಇಚ್ಛೆಯಂತೆ ಮಂಡ್ಯ, ಕನಕಪುರದಲ್ಲಿ ನಿಲ್ಲುತ್ತಾನೋ ಇಲ್ಲವೊ ಎನ್ನುವ ಉಹಾಪೋಹಾಗಳಿಗೆ ನಾನು ಏನು ಹೇಳಲಿ ಎಂದರು. ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಚಾರ ಸಚಿವ ಅಶ್ವತ್‌ ನಾರಾಯಣ ರಾಮಮಂದಿರ ನಿರ್ಮಾಣದ ಬಗ್ಗೆ ಸಾಕಷ್ಟುಚರ್ಚೆ ನಡೆದಿದೆ. ಅಶ್ವತ್‌ ನಾರಾಯಣಗೂ, ರಾಮಮಂದಿರಕ್ಕೂ ಏನು ಸಂಬಂಧ? ಎಂದು ಹೇಳಿ ಕೇಂದ್ರ ಸಚಿವ ಅಮಿತ್‌ ಶಾ ಮಂಡ್ಯಕ್ಕೆ ಬರಲಿ ಬಿಡಿ ಎಂದು ಮಾಜಿ ಪ್ರಧಾನಿ ದೇವೇಗೌಡ ನಗೆ ಬೀರಿದರು. ಮದುವೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬರಬೇಕಿತ್ತು. 

Mandya: ದೇವೇಗೌಡರ ಬೆನ್ನಿಗೆ ಚೂರಿ ಹಾಕೋಲ್ಲ: ಶಾಸಕ ಸಿ.ಎಸ್‌.ಪುಟ್ಟರಾಜು

ಆದರೆ, ತುಮಕೂರು ಜಿಲ್ಲೆಯಲ್ಲಿ ಪಂಚರತ್ನ ಕಾರ್ಯಕ್ರಮದಲ್ಲಿ ಇರುವುದರಿಂದ ಬರಲು ಆಗಿಲ್ಲ. ಕೋಲಾರ ಜಿಲ್ಲೆಯಿಂದ ಕುಮಾರಸ್ವಾಮಿ ಪಂಚರತ್ನ ಕಾರ್ಯಕ್ರಮ ಶುರು ಮಾಡಿದ್ದಾರೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಿಖಿಲ್‌ ಕುಮಾರಸ್ವಾಮಿ ಸಹ ಬರಬೇಕಾಗಿತ್ತು. ಬೇರೆ ಕಾರಣದಿಂದ ಸಮಾರಂಭಕ್ಕೆ ಬರಲು ಆಗಲಿಲ್ಲ. ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ನೀವು ಮದುವೆ ಕಾರ್ಯಕ್ರಮಕ್ಕೆ ಹೋಗಲೇ ಬೇಕು ಎಂದಾಗ ನಾನು ಒಪ್ಪಿಕೊಂಡು ಬಂದಿದ್ದೇನೆ ಎಂದು ತಿಳಿಸಿದರು. ಈ ವೇಳೆ ಜೆಡಿಎಸ್‌ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ, ಶಾಸಕ ರಾಜಾವೆಂಕಟಪ್ಪನಾಯಕ, ಸಿಂಧನೂರು ಶಾಸಕ ವೆಂಕಟರಾವ್‌ ನಾಡಗೌಡ ಇದ್ದರು.

ದೇವೇಗೌಡ, ಕುಮಾರಸ್ವಾಮಿ ಸಾಧನೆ ಮನೆಗಳಿಗೆ ತಲುಪಿಸಿ: ಪ್ರಧಾನಿಯಾಗಿ ಎಚ್‌.ಡಿ.ದೇವೇಗೌಡರು ಮತ್ತು ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಡಿದ ಸಾಧನೆಗಳು ಹಾಗೂ 2023 ಚುನಾವಣೆಯ ಪ್ರಣಾಳಿಕೆ ತಿಳಿಸಲು ಜೆಡಿಎಸ್‌ ಪಕ್ಷದಿಂದ ‘ರಾಜ್ಯಕ್ಕೆ ಕುಮಾರಣ್ಣ ದಾಸರಹಳ್ಳಿಗೆ ಮಂಜಣ್ಣ’ ಕಾರ್ಯಕ್ರಮದಲ್ಲಿ ಕ್ಷೇತ್ರದಾದ್ಯಂತ ಮನೆ ಮನೆಗೆ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಥಳೀಯ ಶಾಸಕ ಆರ್‌.ಮಂಜುನಾಥ್‌ ತಿಳಿಸಿದರು. 

ಒಗ್ಗಟ್ಟಿನಿಂದ ಶ್ರಮಿಸಿ ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಎಚ್‌.ಡಿ.ದೇವೇಗೌಡ

ಬಿಜೆಪಿ ಸೇರಲಿ ಮೋದಿ ಬೊಮ್ಮಾಯಿ ಸ್ಪೂರ್ತಿ

ರಾಮನಗರ: ನಗರದ ಅಂಬೇಡ್ಕರ್‌ ನಗರ ವಾರ್ಡ್‌ ಸಾವಿತ್ರಮ್ಮ, ರಾಘವೇಂದ್ರ ಬೆಂಬಲಿಗರು ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ ಗೌಡ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರಿದರು. ಗೌತಮ… ಗೌಡ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಸವರಾಜು ಬೊಮ್ಮಾಯಿ ಅವರ ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಅವರ ಜನಪರ ಆಡಳಿತ ಮೆಚ್ಚಿ ಇಂದು ಹಲವಾರು ಜನರು ಪಕ್ಷಕ್ಕೆ ಸೇರುತ್ತಿದ್ದಾರೆ ಎಂದ​ರು. ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಮುಂದಿನ ದಿನಗಳಲ್ಲಿ ಪಕ್ಷದ ಬೆಳವಣಿಗೆಗೆ ಶ್ರಮಿಸುವವರಿಗೆ ಪಕ್ಷದಲ್ಲಿ ಉತ್ತಮ ಅವಕಾಶಗಳಿವೆ. ಸಕ್ರೀಯವಾಗಿ ಪಕ್ಷದಲ್ಲಿ ಸಂಘಟನೆ ಮಾಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದರು 

Follow Us:
Download App:
  • android
  • ios