ಮಂಡ್ಯ(ಜ.22): ದುಷ್ಕರ್ಮಿಗಳು ಕತ್ತು ಸೀಳಿ ಮಾರ್ವಾಡಿಯನ್ನು ಹತ್ಯೆ ಮಾಡಿರುವ ಘಟನೆ ವಿದ್ಯಾನಗರ ಬಡಾವಣೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ವಿದ್ಯಾನಗರದ 2ನೇ ಕ್ರಾಸ್‌ನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಬುಂಡಾರಾಮ್ ಜೀ ವರಪ(27) ಹತ್ಯೆಯಾದವರು.

ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಕತ್ತು ಕೊಯ್ದು, ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ವೇಳೆ ಮನೆಯಲ್ಲಿಯೇ ಈತನ ಪತ್ನಿ ಮತ್ತು ಮಕ್ಕಳನ್ನು ಬಾಯಿಗೆ ಬಟ್ಟೆ ತುರುಕಿ ಕಟ್ಟಿಹಾಕಿದ್ದರು. ರಾಜಸ್ಥಾನ ಮೂಲದ ಬುಂಡಾ ರಾಮ್ ಜೀ ವರಪ ಮಂಡ್ಯದ ಗುತ್ತಲು ರಸ್ತೆಯಲ್ಲಿ ಮಾತಾಜಿ ಹಾರ್ಡ್‌ವೇರ್ ಅಂಗಡಿ ನಡೆಸುತ್ತಿದ್ದರು.

ರಾಜ್ಯ ಕಬಡ್ಡಿ ಬೀದಿ ರಂಪಾಟ ಬಯಲಿಗೆ! ಆಟಗಾರ್ತಿ ದೂರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ಪರಶರಾಮ, ಎಎಸ್‌ಪಿ ಡಾ. ವಿ.ಜೆ. ಶೋಭಾರಾಣಿ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು. ಪಶ್ಚಿಮ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಶ್ವಾನದಳ ತಂಡ ಆಗಮಿಸಿ ಪರಿಶೀಲಿಸಿತು. ಬುಂಡಾರಾಮ್ ಪತ್ನಿ ಹೇಳಿಕೆ ಆಧರಿಸಿ ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ಕೊಲೆಗೆ ಕಾರಣ ಏನೆಂಬುದು ವಿಚಾರಣೆ ಬಳಿಕವೇ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಚನ್ನರಾ ಯಪಟ್ಟಣ ಬಸ್‌ನಿಲ್ದಾಣದಲ್ಲಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.