Asianet Suvarna News Asianet Suvarna News

Chikkaballapur: ಅಂಗನವಾಡಿ ಕಾರ್ಯಕರ್ತೆಯರ ಬೃಹತ್‌ ಪ್ರತಿಭಟನೆ

ಸುಪ್ರೀಂಕೋರ್ಟ್‌ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಬೇಕೆಂದು ಸೇರಿದಂತೆ ಬಾಕಿ ಇರುವ ವೇತನ ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿ ಗಮನ ಸೆಳೆದರು. 

Massive protest by Anganwadi Workers at Chikkaballapur gvd
Author
First Published Dec 2, 2022, 9:44 PM IST

ಚಿಕ್ಕಬಳ್ಳಾಪುರ (ಡಿ.02): ಸುಪ್ರೀಂಕೋರ್ಟ್‌ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಬೇಕೆಂದು ಸೇರಿದಂತೆ ಬಾಕಿ ಇರುವ ವೇತನ ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಗಂಜಿಗುಂಟೆ ಲಕ್ಷ್ಮೇದೇವಮ್ಮ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನಾ ಧರಣಿ ನಡೆಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ಬಾಕಿ ವೇತನ ಕೊಡಿ : ಅಂಗನವಾಡಿ ಕಾರ್ಯಕರ್ತೆಯರಿಗೆ ಬಾಕಿಯಿರುವ 3 ತಿಂಗಳ ಗೌರವಧನ ಕೂಡಲೇ ಬಿಡುಗಡೆ ಮಾಡಬೇಕು. ನಿಗದಿತ ಅವಧಿಯೊಳಗೆ ಮೊಟ್ಟೆಗಳನ್ನು ಅಂಗನವಾಡಿ ಕೇಂಧ್ರಗಳಿಗೆ ಸರಬರಾಜು ಮಾಡಬೇಕು. ಗ್ಶಾಸ್‌ ಸ್ಟವ್‌ಗಳು ಹಾಳಾಗಿದ್ದು ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಏನು ಪ್ರಯೋಜವಾಗಿಲ್ಲ. ಬಾಕಿ ಇರುವ ತರಕಾರಿ, ಬಾಡಿಗೆ ಹಾಗೂ ಗ್ಯಾಸ್‌ ಹಣ ಕೊಡಬೇಕು. 3 ವರ್ಷದಿಂದ ಅಂಗನವಾಡಿ ಕೇಂಧ್ರಗಳಿಗೆ ಕೊಡಬೇಕಾದ ಅಟಿಕೆ ಸಾಮಾನುಗಳು ಕೂಡಲೇ ವಿತರಿಸಬೇಕು, ಸುಮಾರು ತಿಂಗಳಿನಿಂದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಕೆಲವು ಕಡೆ ಕಾರ್ಯಕರ್ತೆ ಸಹಾಯಕಿ ಇಬ್ಬರು ನಿವೃತ್ತಿಯಾಗಿರುವ ಕಡೆ ಕೂಡಲೆ ಹುದ್ದೆಗಳನ್ನು ಭರ್ತಿ ಮಾಡಬೇಕು. ಎನ್‌ಪಿಎಸ್‌ ಕಾರ್ಡ್‌ ಬರದೇ ಇರುವವರಿಗೆ ಅವರ ಖಾತೆಯಲ್ಲಿ ಕಡಿತ ಮಾಡಿರುವ ಹಣ ವಾಪಸ್‌ ಕೊಡಬೇಕು ಎಂಬುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೊಷಣೆಗಳನ್ನು ಕೂಗಿದರು.

2030ಕ್ಕೆ ರಾಜ್ಯದಲ್ಲಿ ಎಚ್‌ಐವಿ ಶೂನ್ಯಕ್ಕೆ ಇಳಿಸಲು ಪಣ: ಸಚಿವ ಸುಧಾಕರ್‌

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಡಾ.ಎನ್‌.ತಿಪ್ಪೇಸ್ವಾಮಿ, ಕಾರ್ಮಿಕ ಅಧಿಕಾರಿ ವರಲಕ್ಷ್ಮೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಅಶ್ವತ್ಥಮ್ಮಗೆ ಪ್ರತಿಭಟನಕಾರರು ತಮ್ಮ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯುನ ಹಿರಿಯ ಮುಖಂಡ ಸಿದ್ದಗಂಗಪ್ಪ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ರತ್ನಮ್ಮ, ಖಜಾಂಚಿ ವೆಂಕಟಲಕ್ಷ್ಮೇ, ಅಶ್ವತ್ಥಮ್ಮ, ಗುಲಾಜರ್‌, ಸೌಭಾಗ್ಯಮ್ಮ, ಭಾಗ್ಯಮ್ಮ, ಮುನಿರತ್ನಮ್ಮ, ಗೀತಾ, ಪದ್ಮಾವತಿಬಾಯಿ, ಮಂಜುಳ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

 ಶಿಕ್ಷಕಿಯರನ್ನಾಗಿ ಪರಿಗಣಿಸಿ: ಗ್ಯಾಚ್ಯುಟಿ ಪಾವತಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣಕ್ಕಾಗಿ ಒತ್ತಾಯಿಸಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ)ದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು. ಗ್ರಾಚ್ಯುಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು. ಗ್ರಾಚ್ಯುಟಿ ಕಾಯ್ದೆಯ ಪ್ರಕಾರ ಅಂಗನವಾಡಿ ನೌಕರರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂಬ ಐತಿಹಾಸಿಕ ತೀರ್ಪು ನೀಡಿತ್ತು. ಕೋರ್ಟ್‌ ನಿರ್ದೇಶನದಂತೆ ರಾಜ್ಯಾದ್ಯಂತ ಸಾವಿರಾರು ನಿವೃತ್ತಿ ನೌಕರರು ಸಿಡಿಪಿಒ,ಡಿಡಿ, ನಿರ್ದೇಶಕರು ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಅರ್ಜಿಯನ್ನು ಸ್ವತಃ ಹಾಗೂ ಅಂಚೆ ಮುಖಾಂತರ ಸಲ್ಲಿಸಿದ್ದಾರೆ.

Chikkaballapur: ಡಿ.ಕೆ.ಶಿವಕುಮಾರ್‌ ಹಿನ್ನಲೆ ಏನು: ಸಂಸದರ ಪ್ರಶ್ನೆ

ಆದರೆ ಕೆಲವೆಡೆ ಸಿಡಿಪಿಒ, ಡಿ.ಡಿ, ನಿರ್ದೇಶಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಅರ್ಜಿಗಳನ್ನು ತೆಗೆದುಕೊಳ್ಳಲು ಕೆಲವೆಡೆ ನಿರಾಕರಿಸಿದ್ದಾರೆ. ಮಾತ್ರವಲ್ಲ, ಹಲವಾರು ನೌಕರರಿಗೆ ನೇಮಕಾತಿ ಮತ್ತು ನಿವೃತ್ತಿಯ ಆದೇಶಗಳನ್ನು ನೀಡಿಲ್ಲ.ಈ ಸಂದರ್ಭದಲ್ಲಿ ಕೇಳಲು ಹೋದರೆ ನಿರಾಕರಿಸಿರುವ ಘಟನೆಗಳಿವೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ 48 ವರ್ಷಗಳ ಇತಿಹಾಸದಲ್ಲಿ ಬಂದಂತಹ ಒಂದು ಸವಲತ್ತನ್ನು ಪಡೆಯಲು ಬೇಕಾದ ದಾಖಲಾತಿಗಳನ್ನು ಹೊಂದಿಸಿಕೊಳ್ಳಲು ಬಿಡದ ಇಲಾಖೆಯ ವ್ಯವಸ್ಥೆಯನ್ನು ಸರಿಪಡಿಸಬೇಕು.ಗ್ರಾಚ್ಯುಟಿಗೆ ಸಲ್ಲಿಸಿರುವ ಅರ್ಜಿದಾರರಿಗೆ ಕೂಡಲೇ ಪರಿಹಾರ ನೀಡಲು ರಾಜ್ಯ ಸಚಿವ ಸಂಪುಟ ಆದೇಶಿಸಬೇಕು ಎಂದು ಆಗ್ರಹಿಸಿದರು.

Follow Us:
Download App:
  • android
  • ios