ಬೆಳ್ತಂಗಡಿ, (ಫೆ.14): ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ವೇದಿಕೆಯ ಚಪ್ಪರ ಕುಸಿದು ಬಿದ್ದು ಹಲವರು ಗಾಯಗೊಂಡಿರುವ ಘಟನೆ ಬಗ್ಗೆ ವರದಿಯಾಗಿದೆ.

ಮಸ್ತಕಾಭಿಷೇಕ ಕಾರ್ಯಕ್ರಮ ಪ್ರಯುಕ್ತ ಪಂಚಮಹಾವೈಭವ ನಡೆಯುತ್ತಿದ್ದ ಬೃಹತ್ ವೇದಿಕೆಗೆ ಹಾಕಿದ್ದ ಪೆಂಡಾಲ್ ಇಂದು (ಗುರುವಾರ) ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ.

ಧರ್ಮಸ್ಥಳದಲ್ಲಿ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಚಾಲನೆ

ಪೆಂಡಾಲ್ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಯಿದ್ದು, ಸ್ವಯಂಸೇವಕರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಮಧ್ಯಾಹ್ನ 12.30ರ ಸುಮಾರಿಗೆ ತಗಡು ಶೀಟುಗಳಿಂದ ನಿರ್ಮಿಸಲಾಗಿದ್ದ ಈ ಪೆಂಡಾಲ್ ನ ಬಹುಭಾಗ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ.

 ಪೆಂಡಾಲ್ ಕುಸಿತದ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ. ಹಾಗಾಗಿ ಭಾರೀ ಅಪಾಯವೊಂದು ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳ ಮಾತು.