ಬೆಂಗಳೂರಿನಲ್ಲಿ ಬುಧವಾರ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ!
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ಟೋಬರ್ 2 ರಂದು ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಪಾಲಿಕೆಯು ಈ ದಿನದಂದು ಅಹಿಂಸೆಯ ತತ್ವಗಳನ್ನು ಗೌರವಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಬೆಂಗಳೂರು (ಸೆ.30): ಸಿಲಿಕಾನ್ ಸಿಟಿಯ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬುಧವಾರ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ದೇಶದಲ್ಲಿ ಅ.2ರ ಬುಧವಾರದಂದು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಅಹಿಂಸೆಯನ್ನು ಮಾರ್ಗದಲ್ಲಿ ನಡೆದ ಗಾಂಧಿ ಅವರ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳುರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಆದ್ದರಿಮದ ಪಾಲಿಕೆ ವ್ಯಾಪ್ತಿಯ ಎಲ್ಲ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ನಗರದಾದ್ಯಂತ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಪಾಲಿಕೆ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮುಡಾ ಕೇಸಿಗೆ ಎಂಟ್ರಿಕೊಟ್ಟ ಇಡಿ; ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ!
ಒಂದು ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಅ.2ರಂದು ಪ್ರಾಣಿ ವಧೆ ಮಾಡುವುದಾಲೀ ಅಥವಾ ಮಾಂಸ ಮಾರಾಟ ಮಾಡುವುದಾಗಲೀ ಕಂಡುಬಂದರೆ ಪಾಲಿಕೆ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಇನ್ನು ಕಸಾಯಿ ಖಾನೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗುರುವಾರದಿಂದ ಎಂದಿನಂತೆ ಕಸಾಯಿ ಖಾನೆಗಳು ಹಾಗೂ ಮಾಂಸ ಮಾರಾಟ ಕಾರ್ಯ ನಡೆಯಲಿದೆ ಎಂದು ಪಾಲಿಕೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.